Homeಕರ್ನಾಟಕವಿಧಾನ ಪರಿಷತ್‌ಗೆ ಆಯ್ಕೆಯಾದ 17 ನೂತನ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ವಿಧಾನ ಪರಿಷತ್‌ಗೆ ಆಯ್ಕೆಯಾದ 17 ನೂತನ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ

ವಿಧಾನ ಪರಿಷತ್​ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಸೋಮವಾರ (ಜೂ.24) ಪ್ರಮಾಣ ವಚನ ಸ್ವೀಕರಿಸಿದರು.

ನೂತನ ಸದಸ್ಯರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೂ ಮುನ್ನ ನೂತನ ಸದಸ್ಯರಿಗೆ ಮುಖ್ಯಮತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ಕಾನೂನು ಹಾಗೂ ಸಂಸದೀಯ ಸಚಿವ ಹೆಚ್​ ಕೆ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಧಾನ ಪರಿಷತ್‌ಗೆ ವಿಧಾನಸಭೆಯಿಂದ ಆಯ್ಕೆಯಾದ ಐವನ್ ಡಿಸೋಜ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಿಲ್ಲೀಸ್ ಬಾನು, ಎನ್ ಎಸ್ ಬೋಸರಾಜು, ಯತೀಂದ್ರ ಸಿದ್ದರಾಮಯ್ಯ, ಎ. ವಸಂತ ಕುಮಾರ, ಮೂಳೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ. ರವಿ ಮತ್ತು ಎನ್.ರವಿಕುಮಾರ್ ಹಾಗೂ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಚಂದ್ರಶೇಖರ ಪಾಟೀಲ ಬಸವರಾಜ, ಡಾ. ಧನಂಜಯ್ ಸರ್ಜಿ, ರಾಮೋಜಿಗೌಡ, ಎಸ್‌.ಎಲ್. ಬೋಜೇಗೌಡ, ಕೆ. ವಿವೇಕಾನಂದ ಹಾಗೂ ಡಿ.ಟಿ.ಶ್ರೀನಿವಾಸ ಅವರು ಪ್ರಮಾಣ ವಚನ ಸ್ವೀಕರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments