ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದ ಉಸ್ತುವಾರಿಯನ್ನು ಮಾಜಿ ಸಂಸದರು ಹಾಗೂ ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರ ಹೆಗಲಿಗೆ ವಹಿಸಲಾಗಿದೆ.
ರಾಹುಲ್ ಗಾಂಧಿ ಅವರು ಏಪ್ರಿಲ್ 18ರಂದು ತಮಿಳುನಾಡಿಗೆ ತೆರಳಲಿದ್ದು, ಪೊನ್ನೇರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಪೂರ್ವಸಿದ್ಧತೆಯಲ್ಲಿ ತೊಡಗಿರುವ ಡಿ.ಕೆ. ಸುರೇಶ್ ಅವರು ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮಗಳ ಸಿದ್ಧತೆ ಕುರಿತಂತೆ ಕೇಂದ್ರ ವೀಕ್ಷಕರ ಜತೆ ಸಭೆ ನಡೆಸಿದರು. ಡಿ.ಕೆ. ಸುರೇಶ್ ಅವರು ಪಕ್ಷದ ನಿರ್ದೇಶನದಂತೆ ಕಳೆದ ಕೆಲವು ದಿನಗಳಿಂದ ತಮಿಳುನಾಡು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ.


