Homeದೇಶತಮಿಳುನಾಡು | ದಳಪತಿ ವಿಜಯ್‌ ಕೀರ್ತಿ ಪಾತಾಕೆ, ಸಿಎಂ ಆಗುವತ್ತ ಹೆಜ್ಜೆ

ತಮಿಳುನಾಡು | ದಳಪತಿ ವಿಜಯ್‌ ಕೀರ್ತಿ ಪಾತಾಕೆ, ಸಿಎಂ ಆಗುವತ್ತ ಹೆಜ್ಜೆ

ಭಾರಿ ಕುತೂಹಲ ಕೆರಳಿಸಿದ ಪಂಚ ವಿಧಾನಸಭಾ ಚುನಾವಣೆಗಳ ಫಲಿತಾಂಶ ಹೊರ ಬೀಳುತ್ತಿದೆ. ಬಹುತೇಕ ಕಡೆಗಳಲ್ಲಿ ಎಕ್ಸಿಟ್‌ ಪೋಲ್‌ ವರದಿಯಂತೆ ಫಲಿತಾಂಶ ಬರುತ್ತಿದ್ದು, ತಮಿಳುನಾಡಿನಲ್ಲಿ ಮಾತ್ರ ಅಚ್ಚರಿಯ ಬೆಳವಣಿಗೆ ಕಂಡುಬಂದಿದೆ. ದಳಪತಿ ವಿಜಯ್‌ ನೇತೃತ್ವದ ಟಿವಿಕೆ ಆರಂಭಿಕ ಟ್ರೆಂಡ್‌ನಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ದಳಪತಿ ವಿಜಯ್‌ ಅವರೇ ಆಗುವ ಸಾಧ್ಯತೆ ದಟ್ಟವಾಗಿದೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದ ಖ್ಯಾತ ನಟದಳಪತಿವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಅಭೂತಪೂರ್ವ ಮುನ್ನಡೆ ಸಾಧಿಸುವ ಮೂಲಕ ಇಡೀ ದೇಶದ ಗಮನ ಸೆಳೆದಿದೆ. ದಶಕಗಳಿಂದ ರಾಜ್ಯವನ್ನಾಳುತ್ತಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಶಾಕ್ ನೀಡಿರುವ ವಿಜಯ್, ಮೊದಲ ಪ್ರಯತ್ನದಲ್ಲೇಕಿಂಗ್ ಮೇಕರ್ಬದಲು ನೇರವಾಗಿಕಿಂಗ್ಆಗುವತ್ತ ಹೆಜ್ಜೆ ಹಾಕಿದ್ದಾರೆ.

ಪ್ರಸ್ತುತ ಟ್ರೆಂಡ್‌ಗಳ ಪ್ರಕಾರ, ವಿಜಯ್ ಅವರ ಪಕ್ಷವು ಬಹುಮತಕ್ಕೆ ಬೇಕಾದ 118 ಸ್ಥಾನಗಳ ಗಡಿ ದಾಟುತ್ತಿದೆ. ಇದು ತಮಿಳುನಾಡು ರಾಜಕಾರಣದಲ್ಲಿ ಹೊಸ ಯುಗದ ಆರಂಭ ಎಂದೇ ವಿಶ್ಲೇಷಿಸಲಾಗುತ್ತಿದೆ. ಆಡಳಿತಾರೂಢ ಡಿಎಂಕೆ ಪಕ್ಷ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಎಐಎಡಿಎಂಕೆ ನೇತೃತ್ವದ ಎನ್​ಡಿಎ ಮೈತ್ರಿಕೂಟ ಎರಡನೇ ಸ್ಥಾನ ಪಡೆಯುತ್ತಿದೆ.

ದ್ರಾವಿಡ ಪಕ್ಷಗಳ ದಶಕಗಳ ಪ್ರಾಬಲ್ಯವನ್ನು ಮುರಿದ ದಳಪತಿ ವಿಜಯ್ ನೇತೃತ್ವದ ತಮಿಳಗಾ ವೆಟ್ರಿ ಕಲಗಂ  ತನ್ನ ಮೊದಲ ಚುನಾವಣೆಯಲ್ಲಿ ಭರ್ಜರಿ ಸಾಧನೆ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments