Homeಕರ್ನಾಟಕಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡದೇ ಉದ್ಯಮಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ಕಿಡಿ

ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡದೇ ಉದ್ಯಮಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ಕಿಡಿ

ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಕೆಲಸ ಮಾಡುತ್ತಿದೆ. ಉದ್ಯಮಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಆದರೆ, ರೈತರ ಸಾಲಮನ್ನಾ ಮಾಡಿಲ್ಲ ಎಂದು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಎಐಸಿಸಿ ಮುಖಂಡ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.

ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, “ನಾವು ಅಧಿಕಾರಕ್ಕೆ ಬಂದರೆ ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ 24 ಸಾವಿರ ರೂ. ನೀಡುತ್ತೇವೆ” ಎಂದು ತಮ್ಮ ಗ್ಯಾರಂಟಿ ಘೋಷಣೆಯನ್ನು ಪುನರುಚ್ಚರಿಸಿದರು.

“ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಿಸುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ ಪದ್ಧತಿ ರದ್ದುಗೊಳಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉದ್ಯೋಗ ಭದ್ರತಾ ಯೋಜನೆ ಜಾರಿ ಮಾಡುತ್ತೇವೆ” ಎಂದು ಹೇಳಿದರು.

“ಈ ಬಾರಿಯ ಚುನಾವಣೆ ಎರಡು ವಿಚಾರದಲ್ಲಿ ನಡೆಯುತ್ತಿದೆ. ಒಂದು ಸಂವಿಧಾನ ಉಳಿವು ಮತ್ತೊಂದು ಕಡೆ ಸಂವಿಧಾನ ಮುಗಿಸುವ ಕೆಲಸ. ನಾವು ಸಂವಿಧಾನ ಉಳಿವಿಗಾಗಿ ಭಾರತ್‌ ಜೋಡೋ ಯಾತ್ರೆ ಮಾಡಿದೇವು. ಆದ್ರೆ ಬಿಜೆಪಿ ಇ.ಡಿ, ಐಟಿ ಹಾಗೂ ಸಿಬಿಐ ಮೂಲಕ ಹದರಿಸಿ ದೊಡ್ಡ ಭ್ರಷ್ಟಾಚಾರ ಮಾಡಿದೆ. ಚುನಾವಣಾ ಬಾಂಡ್‌ ಕಾನೂನುಬಾಹಿರವೆಂದು ಸುಪ್ರೀಂಕೋರ್ಟ್‌ ಹೇಳಿದೆ. ಚುನಾವಣಾ ಬಾಂಡ್‌ ಮೂಲಕ ಕೋಟ್ಯಂತರ ರೂಪಾಯಿ ಸಂಗ್ರಹಿಸಲಾಗಿದೆ. ಇದು ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದೆ” ಎಂದು ರಾಹುಲ್ ಗಾಂಧಿ ಆರೋಪಿಸಿದರು.

“ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡವರಿಗೆ, ಮಹಿಳೆಯರು, ಯುವಕರಿಗೆ ಅನುಕೂಲವಾಗಿದೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ರೈತರಿಗೆ ನ್ಯಾಯ ಸಿಕ್ಕಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡಿದ್ದು, ಈ ವೇಳೆ ರೈತರ ಸಂಕಷ್ಟ ಕಂಡಿದ್ದೇನೆ” ಎಂದರು.

“ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್‌ಅನ್ನು ಬಿಜೆಪಿ ಬಿ ಟೀಮ್‌ ಎಂದು ಹೇಳಿದ್ದೆ. ಆದರೆ ಈಗ ಜೆಡಿಎಸ್‌, ಬಿಜೆಪಿ ಇಬ್ಬರೂ ಪಾರ್ಟನರ್ ಆಗಿದ್ದಾರೆ” ಎಂದು ಟೀಕಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments