Homeಕರ್ನಾಟಕಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು.
ಮೃತ ಸುದೀಪ್ ಭಂಡಾರಿ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಸುದೀಪ್ ಅವರು ಹೆಬ್ರಿಯ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments