Homeಕರ್ನಾಟಕಭ್ರೂಣ ಪತ್ತೆ-ಹತ್ಯೆ ಜಾಲ ಬೇಧಿಸಲು ಹಿಂದೇಟು ಹಾಕುತ್ತಿರುವ ಸರ್ಕಾರ: ಆರ್‌ ಅಶೋಕ್‌ ಆರೋಪ

ಭ್ರೂಣ ಪತ್ತೆ-ಹತ್ಯೆ ಜಾಲ ಬೇಧಿಸಲು ಹಿಂದೇಟು ಹಾಕುತ್ತಿರುವ ಸರ್ಕಾರ: ಆರ್‌ ಅಶೋಕ್‌ ಆರೋಪ

ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬಂತೆ ಸಾರ್ವಜನಿಕರ ಜೀವ ರಕ್ಷಣೆ ಮಾಡಬೇಕಾದ ಆರೋಗ್ಯ ಇಲಾಖೆಯೇ ಭ್ರೂಣ ಪತ್ತೆ-ಹತ್ಯೆ ಜಾಲದಲ್ಲಿ ಶಾಮೀಲಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಗಂಭೀರವಾಗಿ ಆರೋಪಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಹಂಚಿಕೊಂಡಿರುವ ಅವರು, “ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರೇ, ಭ್ರೂಣ ಹತ್ಯೆ ಪ್ರಕರಣದ ವರದಿ ಸಲಿಸಬಾರದು ಎಂದು ಇಷ್ಟೊಂದು ಒತ್ತಡ ಹೇರುತ್ತಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಯಾರ ಕುಮ್ಮಕ್ಕಿದೆ, ಯಾವ ಬೆಂಬಲದಿಂದ ಅಧಿಕಾರಿಗಳ ಈ ಕಳ್ಳಾಟ ನಡೆಯುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

“ಇದನ್ನೆಲ್ಲಾ ನೋಡುತ್ತಿದ್ದರೆ ರಾಜ್ಯದಲ್ಲಿ ತಾಂಡವವಾಡುತ್ತಿರುವ ಅಮಾನುಷ ಭ್ರೂಣ ಪತ್ತೆ-ಹತ್ಯೆ ಜಾಲವನ್ನು ಬೇಧಿಸಲು ಹಿಂದೇಟು ಹಾಕುತ್ತಿರುವ ಕಾಂಗ್ರೆಸ್‌ ಸರ್ಕಾರ ಕಾಣದ ‘ಕೈ’ಗಳ ಒತ್ತಡಕ್ಕೆ ಮಣಿದು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎನ್ನುವ ಅನುಮಾನ ಮೂಡುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಈ ಪ್ರಕರಣದ ಆಳ-ಅಗಲ, ಗಂಭೀರತೆ, ಮತ್ತು ಇದರ ಹಿಂದಿರುವ ಪ್ರಭಾವಿ ಶಕ್ತಿಗಳನ್ನು ಅಂದಾಜಿಸಿಯೇ ನಾನು ಈ ಪ್ರಕರಣದ ತನಿಖೆಗೆ ಎಸ್ ಐಟಿ ರಚಿಸಬೇಕು, ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು ಎಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಒತ್ತಾಯಿಸಿದ್ದು. ಮಹಿಳೆಯರ ವೋಟಿಗಾಗಿ ಅವರ ಮೂಗಿಗೆ ತುಪ್ಪ ಸವರುವ ಶಕ್ತಿ, ಗೃಹಲಕ್ಷ್ಮಿ ಗ್ಯಾರೆಂಟಿಗಳನ್ನು ನೀಡಿದರೆ ಮಹಿಳೆಯರ ಸಬಲೀಕರಣ ಆಗುವುದಿಲ್ಲ ಸಿಎಂ ಸಿದ್ದರಾಮಯ್ಯ ನವರೇ, ಹುಟ್ಟುವ ಮೊದಲೇ ಹೆಣ್ಣು ಮಕ್ಕಳ ಪ್ರಾಣ ಕಸಿದುಕೊಳ್ಳುವ ಈ ಅಮಾನುಷ ಜಾಲವನ್ನು ಭೇದಿಸುವ ಮೂಲಕ ಮಹಿಳಾ ಸಬಲೀಕರಣದ ಬಗ್ಗೆ ತಮ್ಮ ನಿಜವಾದ ಬದ್ಧತೆ ತೋರಿಸಿ” ಎಂದು ಕುಟುಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments