Homeಕರ್ನಾಟಕಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಹೈಕಮಾಂಡ್‌, ಸಿಎಂ ಕುರ್ಚಿಗೆ ಕಂಟಕ ಇಲ್ಲ!

ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಹೈಕಮಾಂಡ್‌, ಸಿಎಂ ಕುರ್ಚಿಗೆ ಕಂಟಕ ಇಲ್ಲ!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ನೀಡಿದ್ದ ಅನುಮತಿಯನ್ನು ಹೈಕೋರ್ಟ್‌ ಎತ್ತಿಹಿಡಿದಿದ್ದರೂ ಸಿಎಂ ಕುರ್ಚಿಗೆ ಯಾವುದೇ ಕಂಟಕ ಎದುರಾಗಿಲ್ಲ.

ರಾಜ್ಯಪಾಲರು ತನಿಖೆಗೆ ನೀಡಿದ್ದನ್ನು ವಜಾಗೊಳಿಸಬೇಕು ಎಂದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸಂಪರ್ಕಿಸಿ ಮಾತನಾಡಿದ್ದಾರೆ ಎನ್ನಲಾಗಿದೆ.

ಸುರ್ಜೇವಾಲಾ ಮತ್ತು ವೇಣುಗೋಪಾಲ್ ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಡಿ. ಕಾನೂನು ಸಮರ ಮುಂದುವರೆಸುವಂತೆ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ ಎಂದು ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಸಿದ್ದರಾಮಯ್ಯ ಪರ ಹೈಕಮಾಂಡ್ ಅಚಲವಾಗಿ ಬೆಂಬಲಕ್ಕೆ ನಿಂತಿದ್ದು ಸದ್ಯಕ್ಕೆ ನೀವು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂಬ ಸಂದೇಶ ರವಾನಿಸಿದೆ.

ಬಿಜೆಪಿ ಮತ್ತು ಜೆಡಿಎಸ್ ಗಳು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡುತ್ತಿವೆ. ಜೊತೆಗೆ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ಪಡುತ್ತಿವೆ. ಇದಕ್ಕಾಗಿ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ವಿಷಯದ ಬಗ್ಗೆ ರಾಜ್ಯದ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ .ಹಾಗಾಗಿ ನೀವು ಮುಖ್ಯಮಂತ್ರಿ ಆಗಿ ಮುಂದುವರೆಯಿರಿ ಎಂದು ಹೈಕಮಾಂಡ್ ನಾಯಕರು ಮುಖ್ಯಮಂತ್ರಿಗೆ ಭರವಸೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಹಾಗೆಯೇ ಸಿದ್ದರಾಮಯ್ಯ ಪರ ನಿಲ್ಲುವಂತೆ ಪಕ್ಷದ ಇತರೆ ಮುಖಂಡರಿಗೂ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ. ಪ್ರಕರಣದ ಬಗ್ಗೆ ಕಾನೂನಾತ್ಮಕ ಮತ್ತು ರಾಜಕೀಯವಾಗಿ ಒಗ್ಗಟ್ಟಾಗಿ ಹೋರಾಟ ನಡೆಸುವ ಜೊತೆಗೆ ಉತ್ತಮ ಆಡಳಿತದತ್ತ ಗಮನಹರಿಸಿ ಎಂದು ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments