Homeಕರ್ನಾಟಕ2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ

2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ

2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ 2025 ಮೇ 29ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ.

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು 2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿಯನ್ನು ಪ್ರಕಟಿಸಿ, ಶಾಲಾ ಕರ್ತವ್ಯದ ದಿನಗಳು ಮತ್ತು ರಜಾ ಅವಧಿ ಬಗ್ಗೆ ಮಾಹಿತಿ ನೀಡಲಾಗಿದೆ.

ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿಗಳು ಮತ್ತು ರಜಾ ಅವಧಿಗಳು ಅನ್ವಯವಾಗಲಿದೆ ಎಂದು ಶಿಕ್ಷಣ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ಹೇಳಿದೆ.

ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿ ನಿಗದಿಪಡಿಸಲಾಗಿದೆ. ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ನಿಗದಿಪಡಿಸಲಾಗಿದೆ.

2025-26 ನೇ ಸಾಲಿನ ಶಾಲಾ ಕರ್ತವ್ಯದ ದಿನಗಳು

ಮೊದಲನೇ ಅವಧಿ: 2025 ಮೇ 29 ರಿಂದ ಸೆಪ್ಟೆಂಬರ್​ 19 ರವರೆಗೆ
ಎರಡನೇ ಅವಧಿ: 2025 ಅಕ್ಟೋಬರ್​ 08 ರಿಂದ 2026 ಏಪ್ರಿಲ್​ 10 ರವರೆಗೆ

ರಜಾ ದಿನಗಳು

ದಸರಾ ರಜೆ: 2025 ಸೆಪ್ಟೆಂಬರ್​ 20 ರಿಂದ ಅಕ್ಟೋಬರ್​​ 07 ರವರೆಗೆ
ಬೇಸಿಗೆ ರಜೆ: 2026 ಏಪ್ರಿಲ್​​ 11 ರಿಂದ 2026 ಮೇ​ 28 ರವರೆಗೆ

2025-26ರ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟು 123 ರಜಾ ದಿನಗಳಿದ್ದು, ಉಳಿದ 242 ದಿನ ಶಾಲೆಗಳು ನಡೆಯಲಿವೆ. ಪರೀಕ್ಷೆ ಮತ್ತು ಮೌಲ್ಯಾಂಕನ ಕಾರ್ಯಕ್ಕಾಗಿ 26 ದಿನಗಳು, ಪಠ್ಯೇತರ ಚಟುವಟಿಕೆ, ಪಠ್ಯ ಚಟುವಟಿಕೆ, ಸ್ಪರ್ಧೆಗಳ ನಿರ್ವಹಣಾ ಕಾರ್ಯಕ್ಕಾಗಿ 22 ದಿನ, ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನ, ಶಾಲಾ ಸ್ಥಳೀಯ ರಜೆಗಳಿಗೆ 04 ದಿನ ಮತ್ತು ಬೋಧನಾ ಕಲಿಕಾ ಪ್ರಕ್ರಿಯೆಗೆ ಉಳಿಯುವ ಕರ್ತವ್ಯಕ್ಕೆ 178 ದಿನಗಳನ್ನು ಮೀಸಲಿಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments