Homeಕರ್ನಾಟಕಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್ ​ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಡಿ ಫ್ಯಾಕ್ಟರಿ ಬಂದ್ ಆಗಿದ್ದು, ಈಗ ಮುಡಾ ಫ್ಯಾಕ್ಟರಿ ಆರಂಭವಾಗಿದೆ” ಎಂದು ಲೇವಡಿ ಮಾಡಿದರು.

“ಕಾಂಗ್ರೆಸ್ ಪಕ್ಷದ ಅಧ್ಯಕ್ಷರೇ ಮುಡಾ ಹಗರಣ ಹೊರತಂದಿದ್ದಾರೆ.‌ ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ” ಎಂದು ಪರೋಕ್ಷವಾಗಿ ಡಿ ಕೆ ಶಿವಕುಮಾರ್‌ ಉದ್ದೇಶಿಸಿ ಆರೋಪಿಸಿದರು.

“ನನಗೆ ಈ ಬಗ್ಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಸಿದ್ದರಾಮಯ್ಯ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ. ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ” ಎಂದು ಹೇಳಿದರು.

ಕೇಂದ್ರ ಸಚಿವರಾದ ಬಳಿಕ ಮೊಲದ ಬಾರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಿರುವೆ. ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲು ಇಲ್ಲಿಗೆ ಬಂದಿದ್ದೇನೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments