Homeಕರ್ನಾಟಕಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬೊಮ್ಮಾಯಿ

ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬೊಮ್ಮಾಯಿ

ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಮತು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗದಗ ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ. ಸಿಎಂ ರಾಜೀನಾಮೆ ನೀಡಿದರೆ ಮುಂದೆ ಎಂದೂ ಕಾಂಗ್ರೆಸ್ ಸರ್ಕಾರ ಬರುವುದಿಲ್ಲ, ನಮಗೆ ಅವಕಾಶ ಇದೆ” ಎಂದರು.

“ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆ. ಯಾವುದೇ ಅಭಿವೃದ್ಧಿಗೆ ಹಣ ಬಿಡುಗಡೆ ಆಗುತ್ತಿಲ್ಲ. ರಾಜ್ಯಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ. ಇಂತಹ ಸರ್ಕಾರದ ಪಡೆದಿರುವುದು ಕರ್ನಾಟಕದ ದೌರ್ಭಾಗ್ಯ, ಆದರೆ, ಈ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ನಾವು ಮಾಡಿಲ್ಲ” ಎಂದು ತಿಳಿಸಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ ಕುರಿತು ಮಾತನಾಡಿ, “ಬೇರೆ ಯಾವುದೇ ಕೆಲಸಕ್ಕೆ ಭೇಟಿಯಾಗಿರಬಹುದು. ನಮ್ಮ‌ ಹೈಕಮಾಂಡ ಬಹಳ ಸ್ಪಷ್ಟವಾಗಿದೆ, ಈ ಸರ್ಕಾರ ಅಭದ್ರಗೊಳಿಸುವ ಪ್ರಶ್ನೆ ಇಲ್ಲ. ತಾತ್ವಿಕವಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟವಿದೆ” ಎಂದರು.

ಜಾತಿಗಣತಿ ವಿಷಯವಾಗಿ ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿ, “ಹರಿಪ್ರಸಾದ್ ಮನದಾಳದ ಮಾತು ಹೇಳಿದ್ದಾರೆ‌. ಜಾತಿಗಣತಿ ಮುಖ್ಯನೋ ಸರ್ಕಾರ ಬೀಳೋದು ಮುಖ್ಯವೋ ಅನ್ನುವುದನ್ನು ಬಿ‌ ಕೆ ಹರಿಪ್ರಸಾದ್ ಸ್ಪಷ್ಟ ಪಡಿಸಲಿ. ಜಾತಿ ಗಣತಿ ಪ್ರಕ್ರಿಯೆ ಅಲ್ಲ, ಅದು ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯಲು ಮಾಡಿದ್ದು. ನಿಖರವಾಗಿ ಜಾತಿ ಗಣತಿಯ ಆದೇಶವಿಲ್ಲ” ಎಂದು ಹೇಳಿದರು.

“ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ ಕಮಿಟಿ ಕೊಟ್ಟ ವರದಿಯನ್ನು ಯಾಕೆ ಸ್ವೀಕರಸಿಲ್ಲ. ಜಯಪ್ರಕಾಶ್ ಹೆಗಡೆ ಅವರು ಆಯೋಗದ ಅಧ್ಯಕ್ಷರಾಗಿ 2-3 ತಿಂಗಳಲ್ಲಿ ಹೇಗೆ ವರದಿ ಕೊಡುತ್ತಾರೆ? ಕಾಂತರಾಜ್ ಅವರು 2-3 ವರ್ಷ ಡಾಟಾ ತೆಗೆದುಕೊಂಡಿದ್ದರು. ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ. ಆ ವರದಿ ತೆಗೆದುಕೊಂಡು ಹಿಂದುಳಿದ ವರ್ಗ ಉದ್ದಾರ ಮಾಡುತ್ತೇವೆ ಅಂತ ಹೇಳುತ್ತಾರೆ. ಗೊಂದಲ ಸ್ಪಷ್ಟವಾಗಬೇಕು” ಎಂದು ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments