ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ಕಟ್ಟಲು ಅನುಮತಿ ನೀಡುವಂತೆ ಕರ್ನಾಟಕ ಮುಜರಾಯಿ ಇಲಾಖೆ ಉತ್ತರ ಪ್ರದೇಶದ ಯೋಗಿ ಸರ್ಕಾರಕ್ಕೆ ಪತ್ರ ಬರೆದಿದೆ.
ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, “ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು, ರಾಮಭಕ್ತರು ಅಯೋಧ್ಯೆಗೆ ಬರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅವರಿಗೆ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಪತ್ರದ ಮೂಲಕ ಮನವಿ” ಮಾಡಿದೆ.
5 ಎಕರೆ ಜಾಗದಲ್ಲಿ 10 ಕೋಟಿ ವೆಚ್ಚದಲ್ಲಿ ರಾಜ್ಯದ ಭಕ್ತಾದಿಗಳ ಅನುಕೂಲಕ್ಕೆ ಮುಜರಾಯಿ ಇಲಾಖೆ ಅತಿಥಿ ಗೃಹ ನಿರ್ಮಾಣ ಮಾಡಲು ಸಿದ್ಧವಿದೆ ಅನುಮತಿ ನೀಡಿ ಎಂದು ಮನವಿಯಲ್ಲಿ ಹೇಳಿದೆ.