Homeಕರ್ನಾಟಕಪೆಟ್ರೋಲ್-ಡೀಸೆಲ್ ದರ ಹೆಚ್ಚಳ ವಾಪಸ್ ತಗೋವರೆಗೂ ಹೋರಾಟ ನಿಲ್ಲಲ್ಲ: ವಿಜಯೇಂದ್ರ ಎಚ್ಚರಿಕೆ

ಪೆಟ್ರೋಲ್-ಡೀಸೆಲ್ ದರ ಹೆಚ್ಚಳ ವಾಪಸ್ ತಗೋವರೆಗೂ ಹೋರಾಟ ನಿಲ್ಲಲ್ಲ: ವಿಜಯೇಂದ್ರ ಎಚ್ಚರಿಕೆ

ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್‌ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಪೆಟ್ರೋಲ್-ಡೀಸೆಲ್ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ” ಎಂದಿದ್ದಾರೆ.

“ಜನಸಾಮಾನ್ಯರು, ಕಾರ್ಮಿಕರು, ಬಡವರು ಹಾಗೂ ಮಧ್ಯಮ ವರ್ಗದವರು ಬೆಲೆ ಏರಿಕೆಯ ಚಕ್ರವ್ಯೂಹದಲ್ಲಿ ಸಿಲುಕಿ ನಲುಗುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಈ ಬೆಲೆ ಏರಿಕೆಯ ಬಿಸಿ ಪಂಪ್ ಸೆಟ್, ಟ್ರಾಕ್ಟರ್ ಸೇರಿದಂತೆ ಇತರ ಕೃಷಿ ಉಪಕರಣಗಳನ್ನು ಬಳಸುವ ರೈತರ ಕೈ ಸುಡಲಿದೆ” ಎಂದು ಹೇಳಿದ್ದಾರೆ.

“ವಾಹನವನ್ನು ಆಶ್ರಯಿಸಿ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೂ ಕೂಡ ಇದರ ಬಿಸಿ ತಟ್ಟಲಿದೆ. ಒಟ್ಟಾರೆಯಾಗಿ ಎಲ್ಲ ಕ್ಷೇತ್ರಗಳಿಗೂ ಬೆಲೆ ಏರಿಕೆಯ ಬಿಸಿತಟ್ಟಿಸುವ ನಿರ್ಧಾರವನ್ನು ಈ ಕೂಡಲೇ ಕೈಬಿಡಬೇಕೆಂದು ಒತ್ತಾಯಿಸುತ್ತೇವೆ” ಎಂದಿದ್ದಾರೆ.

“ರಾಜ್ಯದ ಸಂಪನ್ಮೂಲವನ್ನು ಬಳಸಿಕೊಳ್ಳುವ ಯಾವ ಕಾಳಜಿಯೂ ಸರ್ಕಾರಕ್ಕಿಲ್ಲ, ಬದಲಾಗಿ ರಾಜ್ಯದ ಸಂಪನ್ಮೂಲವನ್ನು ಕೊಳ್ಳೆ ಹೊಡೆಯುವವರಿಗೆ ಆಥಿತ್ಯ ನೀಡುವ ತಾಣವನ್ನಾಗಿಸುತ್ತಿದೆ, ಕಾಂಗ್ರೆಸ್ ಕರ್ನಾಟಕದಲ್ಲಿ ಅರಾಜಕತೆ ಸೃಷ್ಟಿ ಮಾಡಿಯೇ ಅಧಿಕಾರದಿಂದ ಕೆಳಗಿಳಿಯುವ ಶಪಥ ಮಾಡಿದಂತೆ ಕಾಣುತ್ತಿದೆ, ಈ ಕೂಡಲೇ ಪೆಟ್ರೋಲ್ – ಡೀಸೆಲ್ ಗಳ ಮೇಲೆ ಹೆಚ್ಚಿಸಿರುವ ದರವನ್ನು ವಾಪಾಸ್ ಪಡೆಯದಿದ್ದರೆ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ” ಎಂದು ಎಚ್ಚರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments