Homeಕರ್ನಾಟಕತಲೆ ತಗ್ಗಿಸುವಂತಹ ಅಪರಾಧಿ ಚಟುವಟಿಕೆ ನಡೆದಿದ್ದರೂ ಯಾರ ಬಂಧನ ಇಲ್ಲ: ಆರ್‌ ಅಶೋಕ್‌

ತಲೆ ತಗ್ಗಿಸುವಂತಹ ಅಪರಾಧಿ ಚಟುವಟಿಕೆ ನಡೆದಿದ್ದರೂ ಯಾರ ಬಂಧನ ಇಲ್ಲ: ಆರ್‌ ಅಶೋಕ್‌

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್‌ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, “ನಾವೆಲ್ಲರೂ ತಲೆ ತಗ್ಗಿಸುವಂತಹ ಘಟನೆ ರಾಮನಗರದಲ್ಲಿ ನಡೆದಿದೆ. ಬಿಡದಿಯ ಟೊಯೋಟಾ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್‌ ಎಂದು ಬರೆಯಲಾಗಿದೆ. ಜೊತೆಗೆ ಕನ್ನಡಿಗರ ಬಗ್ಗೆ ಅವಾಚ್ಯವಾಗಿ ನಿಂದಿಸಿ ಬರೆಯಲಾಗಿದೆ. ಇಂತಹ ಕಿಡಿಗೇಡಿಗಳಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಇದು ಬಹಳ ಪ್ರತಿಷ್ಠಿತ ಕಂಪನಿಯಾಗಿದ್ದು, ಎಲ್ಲ ಕಡೆ ಸಿಸಿಟಿವಿ ಕ್ಯಾಮರಾ ಇದೆ. ಆದರೂ ಅದನ್ನು ಪರಿಶೀಲಿಸಿ ತಪ್ಪಿತಸ್ಥರನ್ನು ಬಂಧಿಸುವ ಕೆಲಸವನ್ನು ಪೊಲೀಸರು ಇನ್ನೂ ಮಾಡಿಲ್ಲ” ಎಂದರು.

“ಹಾವೇರಿ ಜಿಲ್ಲೆಯಲ್ಲಿ ಹೋರಿ ಹಬ್ಬದ ಸ್ನೇಹ ಜೀವ ಲವ್‌ ಜಿಹಾದ್‌ನಲ್ಲಿ ಅಂತ್ಯವಾಗಿದೆ. ಹಾವೇರಿ ಜಿಲ್ಲೆಯ ಯುವತಿ ಸ್ವಾತಿಯನ್ನು ಪ್ರೀತಿಯ ಬಲೆಗೆ ಬೀಳಿಸಲಾಗಿತ್ತು. ನಂತರ ಕಿಡಿಗೇಡಿ ಯುವಕರು ಮದುವೆಯ ಪ್ರಸ್ತಾಪ ಮಾಡಿ ಆಕೆಯನ್ನು ನಂಬಿಸಿದ್ದರು. ಬಳಿಕ ಆಕೆಯನ್ನು ಪಾಳು ಬಿದ್ದ ಶಾಲೆಗೆ ಕರೆದುಕೊಂಡು ಹೋಗಿ ಕೇಸರಿ ಟವೆಲ್‌ನಲ್ಲಿ ಸಾಯಿಸಿದ್ದಾರೆ. ಈ ಪ್ರಕರಣದ ಎಫ್‌ಐಆರ್‌ ಆದ ಬಳಿಕವೂ ತಾಯಿಗೆ ಮಾಹಿತಿ ನೀಡದೆ ಪೊಲೀಸರು ಪ್ರಕರಣ ಮುಚ್ಚಿಹಾಕಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ನೇಹಾ ಘಟನೆಯಾದಾಗಲೇ ಸರ್ಕಾರ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿತ್ತು. ಆದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ” ಎಂದು ದೂರಿದರು.

“ಹಂಪಿಯಲ್ಲಿ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ದೊಡ್ಡ ಸುದ್ದಿಯಾಗಿದೆ. ಮೂರು ಯುವಕರು ಒಡಿಶಾ ಮೂಲದ ಒಬ್ಬನನ್ನು ಸಾಯಿಸಿ, ಇಸ್ರೇಲ್ ಮಹಿಳೆ ಹಾಗೂ ಹೋಮ್‌ಸ್ಟೇ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. 60% ಗೂ ಅಧಿಕ ಪ್ರವಾಸಿಗರು ಇಸ್ರೇಲ್‌ನಿಂದ ರಾಜ್ಯಕ್ಕೆ ಬರುತ್ತಾರೆ. ಇಲ್ಲಿ ಸುರಕ್ಷತೆ ಇರುವ ಕಾರಣಕ್ಕೆ ವಿದೇಶಿಯರು ಭೇಟಿ ನೀಡುತ್ತಾರೆ. ಈ ಘಟನೆಯಿಂದಾಗಿ ಪ್ರವಾಸಿಗರು ಬರುತ್ತಿಲ್ಲ. ಇದರಿಂದಾಗಿ ಹಂಪಿಗೆ ಕೆಟ್ಟ ಹೆಸರು ಬರುವುದರ ಜೊತೆಗೆ, ಆರ್ಥಿಕತೆ ಕುಸಿದಿದೆ. ಇಷ್ಟೆಲ್ಲ ಆದ ನಂತರವೂ, ವಿದೇಶಿಯರು ನಮ್ಮನ್ನು ಹೊಗಳಿದ್ದಾರೆ ಎಂದು ರಾಜ್ಯಪಾಲರ ಭಾಷಣದಲ್ಲಿ ಹೇಳಿಸಿದ್ದಾರೆ” ಎಂದರು.

“ತಲೆ ತಗ್ಗಿಸುವಂತಹ ಅಪರಾಧಿ ಚಟುವಟಿಕೆಗಳು ನಡೆಯುತ್ತಿದ್ದರೂ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಇದರಿಂದಾಗಿ ಸರ್ಕಾರ ಬದುಕಿದೆಯೇ ಸತ್ತಿದೆಯೇ ಎಂಬ ಪ್ರಶ್ನೆ ಬರುತ್ತಿದೆ. ಹೇಳುವವರು, ಕೇಳುವವರು ಯಾರೂ ಇಲ್ಲದೆ ಗೂಂಡಾ ರಾಜ್ಯ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂದು ಸಮರ್ಥನೆ ಮಾಡಿಕೊಳ್ಳುತ್ತಾರೆ. ಇಂತಹ ಸ್ಥಿತಿಯನ್ನು ಸೃಷ್ಟಿಸಿದ ಸರ್ಕಾರದ ನಡೆಯನ್ನು ಖಂಡಿಸುತ್ತೇನೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments