Homeಕರ್ನಾಟಕಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ವಿಳಂಬವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ವಿಳಂಬವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುವ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆ ವಿಳಂಬವಾಗಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ವಾರ್ತಾಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ಬಗ್ಗೆ ಸ್ಪಷ್ಟನೆ ನೀಡಿದರು.

“ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಸಚಿವಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ, “ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಸಚಿವರಿಗೂ ಸೂಚಿಸಲಾಗಿದೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments