Homeಕರ್ನಾಟಕದರಪಟ್ಟಿ ಪ್ರಕಟಿಸದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದತಿಗೆ ಚಿಂತನೆ: ಸಚಿವ ದಿನೇಶ್‌ ಗುಂಡೂರಾವ್‌

ದರಪಟ್ಟಿ ಪ್ರಕಟಿಸದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದತಿಗೆ ಚಿಂತನೆ: ಸಚಿವ ದಿನೇಶ್‌ ಗುಂಡೂರಾವ್‌

ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಸುಲಿಗೆ ಮಾಡುತ್ತಿರುವ ಬಗ್ಗೆ ಅನೇಕ ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕೆಲವು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳ ಹೊರಭಾಗದಲ್ಲಿ ಇನ್ಮುಂದೆ ದರಪಟ್ಟಿ ಪ್ರಕಟಿಸುವುದು ಕಡ್ಡಾಯ ಮಾಡಲಾಗುವುದು. ದರ ಪಟ್ಟಿ ಪ್ರಕಟಿಸದ ಆಸ್ಪತ್ರೆಗಳ ಪರವಾನಗಿ ರದ್ದುಗೊಳಿಸುವ ಬಗ್ಗೆ ಆಲೋಚಿಸಲಾಗುತ್ತಿದೆ” ಎಂದು ಸಚಿವರು ತಿಳಿಸಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಜ್ವರ, ಕೆಮ್ಮು, ನೆಗಡಿ ಎಂದು ಆಸ್ಪತ್ರೆಗಳಿಗೆ ಚಿಕಿತ್ಸೆಗೆ ತೆರಳಿದರೂ ಸಾವಿರಾರು ರೂಪಾಯಿ ಬಿಲ್ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳು ಸಲ್ಲಿಕೆಯಾಗಿವೆ. ಈ ಬಗ್ಗೆ ಸಾರ್ವಜನಿಕರು ನಮ್ಮ ಇಲಾಖೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ದೂರು ನೀಡಿದ್ದಾರೆ. ಹೀಗಾಗಿ ಕಠಿಣ ಕ್ರಮಕೈಗೊಳ್ಳುತ್ತೇವೆ” ಎಂದು ಹೇಳಿದರು.

ಕೆಪಿಎಂಇ ಮುಖಾಂತರ ಅಂಗೀಕೃತವಾದ ಆಸ್ಪತ್ರೆಗಳು ಆವರಣದಲ್ಲಿ ಹಾಗೂ ಹೊರ ಭಾಗದಲ್ಲಿ ಚಿಕಿತ್ಸಾ ದರ ಪಟ್ಟಿಯನ್ನು ಅಳವಡಿಸಬೇಕು. ಯಾವ್ಯಾವ ಚಿಕಿತ್ಸೆಗಳಿಗೆ ಎಷ್ಟು ದರ ಎಂಬ ಪಟ್ಟಿಯನ್ನು ಅಳವಡಿಸಬೇಕು” ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

“ಆದೇಶ ಪಾಲನೆ ಮಾಡದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಿ ಸೀಜ್ ಮಾಡುವ ಬಗ್ಗೆಯೂ ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈಗಾಗಲೇ ಯಾವ ಚಿಕಿತ್ಸೆಗೆ ಎಷ್ಟು ದರ ಎಂಬುದು ನಿಗದಿಯಾಗಿದೆ. ಅದರ ಬಗ್ಗೆ ಆಸ್ಪತ್ರೆಯ ಅವರಣದಲ್ಲಿ ಸಾರ್ವಜನಿಕರಿಗೆ ತೊರುವ ರೀತಿಯಲ್ಲಿ ಬೋರ್ಡ್ ಹಾಕಬೇಕು ಎಂದು ನಿರ್ದೇಶನ ನೀಡಲಾಗಿದೆ” ಎಂದು ಸಚಿವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments