Homeಕರ್ನಾಟಕರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ: ಎಚ್ ಡಿ ಕುಮಾರಸ್ವಾಮಿ

ರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ: ಎಚ್ ಡಿ ಕುಮಾರಸ್ವಾಮಿ

ರಾಮನಗರ ಜಿಲ್ಲೆಗೆ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ, ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಶುಕ್ರವಾರ ಸಂಜೆ ಮಾಧ್ಯಮಗಳ ಜತೆ ಮಾತನಾಡಿ, ರಾಮನಗರ ಜಿಲ್ಲೆಯ ಹೆಸರನ್ನು ತೆಗೆದು ಬೆಂಗಳೂರು ದಕ್ಷಿಣ ಎಂದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕಟುವಾಗಿ ಟೀಕಿಸಿದರು.

“ಜಿಲ್ಲೆ ರಚನೆ ಮಾಡಿ ರಾಮನಗರ ಎಂದು ಹೆಸರಿಡುವಾಗ, ವಿಧಾನಸಭೆ ಕ್ಷೇತ್ರಕ್ಕೆ ರಾಮನಗರ ಎಂದು ಹೆಸರು ಇಡುವಾಗ ಯಾವುದೇ ಮಾತು ಆಡಲೇ ಇಲ್ಲ. ತಕರಾರು ಮಾಡಲಿಲ್ಲ. ಈಗ ಸ್ವಾರ್ಥಕ್ಕಾಗಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಈ ಸರಕಾರ ಮೊದಲು ಕಾನೂನು ವ್ಯವಸ್ಥೆ ಸರಿ ಮಾಡಲಿ. ಹೆಸರು ಬದಲಾವಣೆ ಮಾಡಲು ಹೊರಟವರ ಪಕ್ಷದ ಎಮ್ ಎಲ್ ಸಿ ಇರುವ ಕಡೆ ದಲಿತನ ಕೈ ಕತ್ತರಿಸಿದ್ದಾರೆ. ರಾಮನಗರ ಎಷ್ಟು ಅಭಿವೃದ್ಧಿ ಆಗಿದೆ ಅನ್ನುವುದನ್ನು ನೋಡಲಿ. ಹೆಸರು ಬದಲಾವಣೆಯಿಂದ ಭೂಮಿಗೆ ಬೆಲೆ ಬರಲ್ಲ. ಹೆಸರು ಬದಲಾಯಿಸಿದರೆ ಅವರ ಪತನ ಶುರುವಾಯಿತು ಎಂದೇ ಲೆಕ್ಕ” ಎಂದು ಹೇಳಿದರು.

“2028 ಅಥವಾ ಅದರೊಳಗೆಯೇ ಆ ಜಿಲ್ಲೆಗೆ ರಾಮನಗರ ಹೆಸರು ಮತ್ತೆ ಬರುತ್ತದೆ. ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments