ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದೆ. ಸಂವಿಧಾನವನ್ನು ಅಪಮಾನಿಸಿದರೆ ಅದಕ್ಕಿಂತ ಬೇರೆ ಪಾಪವಿಲ್ಲ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು.
ತುಮಕೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಾಂಗ್ರೆಸ್ನವರು ಕೆಲವು ವಿಚಾರ ತಿರುಚುತ್ತಾರೆ. ಹೆಗಡೆ ಅವರು ಸಂವಿಧಾನ ಬದಲಾವಣೆ ಮಾಡುತ್ತೇನೆ ಎಂದು ಹೇಳಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ” ಎಂದು ಸಮರ್ಥಿಸಿಕೊಂಡರು.
“ಅಂಥಹ ಪುಣ್ಯಾತ್ಮ ಅಂಬೇಡ್ಕರ್ ಅವರ ಸಂಸ್ಕಾರಕ್ಕೆ ಕಾಂಗ್ರೆಸ್ ಜಾಗ ಕೊಟ್ಟಿಲ್ಲ. ಕಾಂಗ್ರೆಸ್ನವರಿಗೆ ಸಂವಿಧಾನ ಮತ್ತು ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ” ಎಂದರು.