Homeಕರ್ನಾಟಕಮಲೆ ಮಹದೇಶ್ವರ ಬೆಟ್ಟದ ಹನೂರು ವಲಯದಲ್ಲಿ ಹುಲಿ ಹತ್ಯೆ!

ಮಲೆ ಮಹದೇಶ್ವರ ಬೆಟ್ಟದ ಹನೂರು ವಲಯದಲ್ಲಿ ಹುಲಿ ಹತ್ಯೆ!

ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿದೆ. ಹುಲಿಯ ಅರ್ಧ ಕಳೇಬರ ಪತ್ತೆಯಾಗಿದ್ದು, ಕಳ್ಳಬೇಟೆಗಾರರ ಕೈವಾಡದ ಅನುಮಾನ ಸೃಷ್ಟಿಯಾಗಿದೆ.

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಈ ಬಗ್ಗೆ ಶೋಕ ವ್ಯಕ್ತಪಡಿಸಿ, ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.

ಈ ಕಾನನದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನ ಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಈ ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಎಚ್ಚರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments