Homeಕರ್ನಾಟಕರಾಜಧಾನಿಯಲ್ಲಿ ಹಲವೆಡೆ ಧಾರಾಕಾರ ಮಳೆ; ಕರಾವಳಿಯಲ್ಲಿ ರೆಡ್‌ ಅಲರ್ಟ್

ರಾಜಧಾನಿಯಲ್ಲಿ ಹಲವೆಡೆ ಧಾರಾಕಾರ ಮಳೆ; ಕರಾವಳಿಯಲ್ಲಿ ರೆಡ್‌ ಅಲರ್ಟ್

ಸಿಲಿಕಾನ್ ಸಿಟಿಯಲ್ಲಿ ಸೋಮವಾರ ಹಲವೆಡೆ ಧಾರಾಕಾರ ಮಳೆ ಆಗಿದೆ. ಕಾರ್ಪೊರೇಷನ್, ಶಾಂತಿನಗರ, ವಿಲ್ಸನ್ ಗಾರ್ಡನ್, ಲಾಲ್​ಬಾಗ್​, ಬಸವನಗುಡಿ, ಕಬ್ಬನ್​ಪಾರ್ಕ್​, ವಿ.ವಿ.ಪುರಂ, ಬನಶಂಕರಿ, ಚಾಮರಾಜಪೇಟೆ ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ.

ಕರಾವಳಿಯಲ್ಲಿ ಟ್ರಫ್ ಉಂಟಾಗಿರುವ ಹಿನ್ನಲೆ‌ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಐದು ದಿನಗಳ ಮಳೆ ಇರಲಿದೆ ಎಂದು ಹವಮಾನ ಇಲಾಖೆಯಿಂದ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ಮತ್ತು ಜುಲೈ 11 ರವರೆಗೂ ಮಳೆ ಇರಲಿದ್ದು, ರೆಡ್‌ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿಗೆ ಜುಲೈ 10ರ ವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಬೀದರ್, ಕಲ್ಬುರ್ಗಿ , ಯಾದಗಿರಿ ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ನೀಡಿದ್ದು ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments