Homeಕರ್ನಾಟಕತುಂಗಭದ್ರಾ ಜಲಾಶಯ ವಿಚಾರ ರಾಜಕೀಯ ಮಾಡುವ ಸಂಗತಿಯಲ್ಲ: ಸಿಎಂ ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯ ವಿಚಾರ ರಾಜಕೀಯ ಮಾಡುವ ಸಂಗತಿಯಲ್ಲ: ಸಿಎಂ ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ. ಆದರೆ, ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡುವ ಮುನ್ನ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸುತ್ತಾರೆ. ಬಿಜೆಪಿಯವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಅಷ್ಟೇ. ಆದರೆ ಇದು ರಾಜಕೀಯ ಮಾಡುವ ವಿಷಯವಲ್ಲ” ಎಂದರು.

“ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ” ಎಂದು ಹೇಳಿದರು.

ರೈತರಿಗೆ ತೊಂದರೆಯಾಗದಂತೆ ಕ್ರಮ

“ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು” ಎಂದು ತಿಳಿಸಿದರು.

“ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ನೀರು ತುಂಬಿತ್ತು. ಆದರೆ ತುಂಡಾಗಿರುವ ಗೇಟ್‌ ದುರಸ್ತಿಗಾಗಿ 50 ರಿಂದ 60 ಟಿಎಂಸಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನಃ ನೀರು ತುಂಬುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯಂತೆ ಆಗಸ್ಟ್ 15 ರ ನಂತರ ಪುನಃ ಮಳೆಬರುವ ನಿರೀಕ್ಷೆಯಿದೆ. ಆದ್ದರಿಂದ ಈಗ ಪೋಲಾಗಿರುವ ನೀರು ಮತ್ತೊಮ್ಮೆ ಜಲಾಶಯದಲ್ಲಿ ತುಂಬಲಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments