Homeಕರ್ನಾಟಕಹಾಲಿನ ಖರೀದಿ ದರ ಕಡಿತಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ

ಹಾಲಿನ ಖರೀದಿ ದರ ಕಡಿತಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ

ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಮ ವಹಿಸಿ ಹಾಲು ಖರೀದಿ ದರಕ್ಕೆ ತಡೆ ಒಡ್ಡಬೇಕು” ಎಂದು ಆಗ್ರಹಿಸಿದ್ದಾರೆ.

“ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ” ಎಂದು ಸಚಿವರು ಟೀಕಿಸಿದ್ದಾರೆ.

“ಕೆಲ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿವೆ. ಹೊಸ ಖರೀದಿ ದರ ₹30.50 ರಿಂದ ₹29ಕ್ಕೆ ಕುಸಿದಿದೆ. ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿಗಳು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ” ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments