Homeಕರ್ನಾಟಕಉತ್ತರ ಕನ್ನಡ | ಕಂದಕಕ್ಕೆ ಉರುಳಿದ ಲಾರಿ, 14 ಮಂದಿ ಮೃತ, ಸರ್ಕಾರ ಪರಿಹಾರ ಘೋಷಣೆ

ಉತ್ತರ ಕನ್ನಡ | ಕಂದಕಕ್ಕೆ ಉರುಳಿದ ಲಾರಿ, 14 ಮಂದಿ ಮೃತ, ಸರ್ಕಾರ ಪರಿಹಾರ ಘೋಷಣೆ

ತರಕಾರಿ ತುಂಬಿ ವ್ಯಾಪಾರಸ್ಥರೊಂದಿಗೆ ಸಂತೆಗೆ ತೆರಳುತ್ತಿದ್ದ ಲಾರಿಯೊಂದು ಕಂದಕಕ್ಕೆ ಉರುಳಿ 14 ಮಂದಿ ಮೃತಪಟ್ಟು, 10 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಭಾಗದಲ್ಲಿ ನಡೆದಿದೆ.

ಭೀಕರ ಘಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಜೀವ ಕಳೆದುಕೊಂಡಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.

ಹಾವೇರಿಯ ಸವಣೂರಿನಿಂದ ಕುಮಟಾದ ಸಂತೆಗೆ ತೆರಳುತ್ತಿದ್ದ ಲಾರಿಯಲ್ಲಿ ಸುಮಾರು 40ಕ್ಕೂ ಹೆಚ್ಚು ವ್ಯಾಪಾರಸ್ಥರು ತರಕಾರಿಗಳನ್ನು ತುಂಬಿಕೊಂಡು ತೆರಳುತ್ತಿದ್ದರು. ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಲಾರಿ ಕಂದಕಕ್ಕೆ ಉರುಳಿದೆ. ಪರಿಣಾಮ ಲಾರಿಯಲ್ಲಿದ್ದ 9 ಕ್ಕೂ ಹೆಚ್ಚು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಗಾಯಗೊಂಡವರನ್ನು ಯಲ್ಲಾಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಯಲ್ಲಾಪುರ ಆಸ್ಪತ್ರೆಗೆ ಸಾಗಿಸಲಾಗಿದೆ. ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಕೆಲವರು ಕೊನೆಯುಸಿರೆಳೆದಿದ್ದಾರೆ. ಇದೀಗ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಫಯಾಜ್ ಜಮಖಂಡಿ (45), ವಾಸೀಂ ಮುಡಗೇರಿ (35), ಇಜಾಜ್ ಮುಲ್ಲಾ (20), ಸಾದೀಕ್ ಭಾಷ್ (30), ಗುಲಾಮ್ ಹುಷೇನ್ ಜವಳಿ (40), ಇಮ್ತಿಯಾಜ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ (25), ಅಸ್ಲಂ ಬಾಬುಲಿ ಬೆಣ್ಣಿ (24), ಜಲಾಲ ಬಾಷಾ (26) ಜೀವ ಕಳೆದುಕೊಂಡವರು. ಮೃತರೆಲ್ಲ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದವರು ಎಂದು ತಿಳಿದುಬಂದಿದೆ.

ಪರಹಾರ ಘೋಷಣೆ

“ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

“ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ” ಎಂದು ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments