Homeಕರ್ನಾಟಕಹಿರಿಯ ಸಾಹಿತಿ ಕೆ ಷರೀಫಾ ಸೇರಿ ಐವರಿಗೆ ವಿ ಪಿ ಸಿಂಗ್‌ ಪ್ರಶಸ್ತಿ

ಹಿರಿಯ ಸಾಹಿತಿ ಕೆ ಷರೀಫಾ ಸೇರಿ ಐವರಿಗೆ ವಿ ಪಿ ಸಿಂಗ್‌ ಪ್ರಶಸ್ತಿ

  • ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದಿಂದ ಪ್ರಶಸ್ತಿ
  • ಸಂಘದ ಅಧ್ಯಕ್ಷರಾದ ಗಂಧರ್ವ ಸೇನಾ ಅವರಿಂದ ಪ್ರಶಸ್ತಿ ಪುರಸ್ಕೃತರ ಹೆಸರು ಘೋಷಣೆ

ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ವಿ.ಪಿ.ಸಿಂಗ್ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿದೆ.

2025ನೇ ಸಾಲಿಗೆ ಐದು ಜನ ಸಾಧಕರಿಗೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ‘ಒಳಕೋವೆ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಂಘದ ಅಧ್ಯಕ್ಷರಾದ ಗಂಧರ್ವ ಸೇನಾ ಅವರು ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಘೋಷಿಸಿದ್ದಾರೆ.

ತುಳಿತಕ್ಕೊಳಗಾದ ಸಮುದಾಯಗಳ ಪರ ಅಭಿವ್ಯಕ್ತಿಸುವ ಹಿರಿಯ ಸಾಹಿತಿ ಕೆ ಷರೀಫಾ, ವರದಿಗಾರರಾಗಿ, ಸಂಪಾದಕರಾಗಿ ಗಣನೀಯ ಸೇವೆ ಸಲ್ಲಿಸಿರುವ ಐ. ಹೆಚ್ ಸಂಗಮದೇವ, ಹಿಂದುಳಿದ ವರ್ಗಗಳ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸಿರುವ ಶ್ರೀಮತಿ ನಳಿನಾಕ್ಷಿ ಸಣ್ಣಪ್ಪ, ಸಾಮಾಜಿಕ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿರುವ ಎಂ. ನಾಗವೇಣಿ ಹಾಗೂ ಹೈದರಾಬಾದ್ ಕರ್ನಾಟಕದಲ್ಲಿ ಕನ್ನಡ ಭಾಷಾ ಪತ್ರಿಕೆ ಆರಂಭಿಸಿ, ಶೋಷಿತರ ಧ್ವನಿಯಾಗಿರುವ ಸಂಧ್ಯಾಕಾಲ ಪತ್ರಿಕೆಯ ಸಂಪಾದಕ ಶಿವಲಿಂಗಪ್ಪ ಅವರಿಗೆ ವಿ.ಪಿ.ಸಿಂಗ್ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಕೆ.ಷರೀಫಾ ಪರಿಚಯ

ಲೇಖಕಿ ಕೆ.ಷರೀಫಾ ಅವರು 1957 ಮೇ 05ರಂದು ಗುಲಬರ್ಗಾದಲ್ಲಿ ಜನಿಸಿದರು. ತಂದೆ ಬಾಬುಮಿಯಾ, ತಾಯಿ ಪುತಲೀಬೇಗಂ. ಬಿಡುಗಡೆಯ ಕವಿತೆಗಳು, ನೂರೇನ್‌ಳ ಅಂತರಂಗ, ಪಾಂಚಾಲಿ, ಮುಮ್ರಾಜಳ ಮಹಲು, ಬುರ್ಖಾ ಪ್ಯಾರಡೈಸ್, ಸಂವೇದನೆ (ವಿಮರ್ಶೆ), ಮಹಿಳಾ ಮಾರ್ಗ (ಸಹ ಸಂಪಾದನೆ), ಆಧುನಿಕ ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಮಹಿಳಾ ಸಂವೇದನೆ (ಸಂಶೋಧನೆ), ಹೊಸ ಶತಮಾನದ ಕಾವ್ಯ (ಸಂಪಾದನೆ) ಅವರ ಪ್ರಕಟಿತ ಕೃತಿಗಳು. ಅವರಿಗೆ ಮಹಿಳೆ ಮತ್ತು ಸಮಾಜ ಪ್ರಶಸ್ತಿ, ವನಿತಾ ಸಾಹಿತ್ಯ ಶ್ರೀ ಪ್ರಶಸ್ತಿ, ಅತ್ತಿಮಬ್ಬೆ ಸಾಹಿತ್ಯ ಶ್ರೀ ಪ್ರಶಸ್ತಿ, 2019ನೇ ಸಾಲಿನ ಕ.ಸಾ.ಪದ ಶ್ರೀನಿವಾಸ ಸ್ಮರಣಾರ್ಥ ಪಿ.ಕೆ. ನಾರಾಯಣ ದತ್ತಿ ಪ್ರಶಸ್ತಿ ದೊರೆತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments