ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.
ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ ಸೆ.35 ಎ ಅಡಿಯ ವ್ಯಾಖ್ಯಾನ ಒಪ್ಪಲಾಗುವುದಿಲ್ಲ. ಸೆ. 35 ಎ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಅನುಮತಿ ನೀಡಿದರೆ ಎಲ್ಲ ಬ್ಯಾಂಕ್ಗಳೂ ಇದನ್ನೇ ಕೇಳಬಹುದು. ಆಗ ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆ್ಯಕ್ಟ್ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.