ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್‌ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಅವರಿಗೆ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ 82ನೇ ಸಿಟಿ ಸಿವಿಲ್ ನ್ಯಾಯಾಲಯವು ಆದೇಶಿಸಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಅವರಿಗೆ ಎರಡು ಲಕ್ಷ ಬಾಂಡ್ ಮತ್ತು ಇಬ್ಬರ ಶೂರಿಟಿ ಮೇರೆಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ ನಲ್ಲಿ ಜೈಲು ಸೇರಿದ್ದ ನಾಗೇಂದ್ರ ಜುಲೈ 12ರಂದು ಮಾಜಿ ಸಚಿವ ಬಿ.ನಾಗೇಂದ್ರ ಅರವನ್ನು ಇ.ಡಿ ಬಂಧಿಸಿತ್ತು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.
ಇಡಿ. ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ಅನೇಕ ವಿಚಾರಗಳ ಬಗ್ಗೆ ಪ್ರಕಟಣೆಯಲ್ಲಿ ಬಹಿರಂಗವಾಗಿದೆ. 187 ಕೋಟಿ ರೂ. ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಪತ್ರಿಕಾ ಪ್ರಕಟಣೆಯಲ್ಲಿ 24 ಮಂದಿ ಆರೋಪಿಗಳ ಹೆಸರು ಉಲ್ಲೇಖಿಸಿದೆ. ಪ್ರಕರಣದಲ್ಲಿ ಬಿ.ನಾಗೇಂದ್ರ ಪ್ರಮುಖ ರೂವಾರಿ ಎಂದು ಇ.ಡಿ ಉಲ್ಲೇಖಿಸಿದೆ.