Homeಕರ್ನಾಟಕವಾಲ್ಮೀಕಿ ನಿಗಮ ಅಕ್ರಮ | ಜಾರಿ ನಿರ್ದೇಶಾನಾಲಯದಿಂದ ಕೋರ್ಟ್​​ಗೆ ತನಿಖಾ ವರದಿ ಸಲ್ಲಿಕೆ

ವಾಲ್ಮೀಕಿ ನಿಗಮ ಅಕ್ರಮ | ಜಾರಿ ನಿರ್ದೇಶಾನಾಲಯದಿಂದ ಕೋರ್ಟ್​​ಗೆ ತನಿಖಾ ವರದಿ ಸಲ್ಲಿಕೆ

ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶಾನಾಲಯ (ಇ.ಡಿ) ಬುಧವಾರ ವರದಿ ಸಲ್ಲಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ ಇ.ಡಿ ಮಾಹಿತಿ ಹಂಚಿಕೊಂಡಿದ್ದು, ಇ.ಡಿ ಸಲ್ಲಿಸಿರುವ ವರದಿಯನ್ನು ವಿಶೇಷ ಕೋರ್ಟ್​ ಪಡೆದುಕೊಂಡಿದೆ.

ಕರ್ನಾಟಕ ಸರಕಾರದ ಸಂಸ್ಥೆಯಾದ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಸೂತ್ರದಾರಿ ಎಂದು ಹೇಳಿರುವ ಜಾರಿ ನಿರ್ದೇಶನಾಲಯ ಈ ಸಂಸ್ಥೆಯಿಂದ ನೂರಾರು ಕೋಟಿ ರೂಪಾಯಿಗಳನ್ನು ಈ ವರ್ಷದ ಆರಂಭದಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರ ಪರವಾಗಿ ವರ್ಗಾಯಿಸಲಾಗಿದೆ ಎಂದು ಆರೋಪಿಸಿದೆ.

ಈ ಪ್ರಕರಣದ ಸಂಬಂಧ ಈ ಹಿಂದೆಯೆ ಬೆಂಗಳೂರಿನ ಅಕ್ರಮ ಹಣ ವರ್ಗಾವಣೆ ತಡೆ ನ್ಯಾಯಾಲಯದೆದುರು ಪ್ರಾಸಿಕ್ಯೂಟ್ ದೂರು ಅಥವಾ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಇ.ಡಿ ಹೇಳಿದೆ. ಈ ಆರೋಪ ಪಟ್ಟಿಯನ್ನು ನ್ಯಾಯಾಲಯವು ಗಮನಕ್ಕೆ ತೆಗೆದುಕೊಂಡಿದೆ ಎಂದೂ ಅದು ತಿಳಿಸಿದೆ.

ಶಾಸಕ ಹಾಗೂ ಪರಿಶಿಷ್ಟ ಪಂಗಡಗಳ ವ್ಯವಹಾರ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ. ಸತ್ಯನಾರಾಯಣ ವರ್ಮ, ಎಟಕಾರಿ ಸತ್ಯನಾರಾಯಣ, ಜೆ.ಜಿ.ಪದ್ಮನಾಭ, ನಾಗೇಶ್ವರ್ ರಾವ್, ನೆಕ್ಕಂಟಿ ನಾಗರಾಜ್ ಹಾಗೂ ವಿಜಯ್ ಕುಮಾರ್ ಗೌಡ ಅವರ ನೆರವಿನೊಂದಿಗೆ ಈ ಹಗರಣವನ್ನು ಎಸಗಲಾಗಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ಜಾರಿ ನಿರ್ದೇಶನಾಲಯ ಹೇಳಿದೆ. ಈ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯ ನಾಗೇಂದ್ರರನ್ನು ಈಗಾಗಲೇ ಬಂಧಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments