Homeಕರ್ನಾಟಕವಾಲ್ಮೀಕಿ ನಿಗಮ ಅಕ್ರಮ | ಮಾಜಿ ಸಚಿವ ನಾಗೇಂದ್ರ ಸೂಚನೆಯಂತೆ ಹಣ ವರ್ಗಾವಣೆ

ವಾಲ್ಮೀಕಿ ನಿಗಮ ಅಕ್ರಮ | ಮಾಜಿ ಸಚಿವ ನಾಗೇಂದ್ರ ಸೂಚನೆಯಂತೆ ಹಣ ವರ್ಗಾವಣೆ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 196 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯ ಸಂಪೂರ್ಣ ಮಾಸ್ಟರ್ ಮೈಂಡ್ ಮಾಜಿ ಸಚಿವ ನಾಗೇಂದ್ರ ಎಂಬುದು ಬಯಲಾಗಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ 82 ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಭಾಗಿಯಾಗಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ಹಗರಣ ಹೇಗೆ ನಡೆಯಿತೆಂದು ಎಳೆಎಳೆಯಾಗಿ ಬರೆದಿದ್ದಾರೆ. ನಾಗೇಂದ್ರ ಸೇರಿ ಐದು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು, ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ ಎಂದು ಇ.ಡಿ ಉಲ್ಲೇಖಿಸಿದೆ.

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸತ್ಯನಾರಯಣವರ್ಮ ಜೊತೆ ನಿಕಟ ಸಂಪರ್ಕ ಹೊಂದಿರುವ ಬಗ್ಗೆ ಹಾಗೂ ಹಣದ ಬಳಕೆಯ ಬಗ್ಗೆ ಉಲ್ಲೇಖ ಮಾಡಲಾಗಿದೆ. ನಾಗೇಂದ್ರನ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ.

ಈ ಹಣದಲ್ಲಿ ಒಟ್ಟು 21 ಕೋಟಿ ರೂ. ಹಣವನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮನಿಟ್ರಯಲ್ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments