Homeಕರ್ನಾಟಕವಾಲ್ಮೀಕಿ ನಿಗಮ ಹಗರಣ: ಬಾರ್​, ಚಿನ್ನದಂಗಡಿ ಖಾತೆಗಳಿಗೆ ಅಕ್ರಮ ಹಣ ವರ್ಗಾವಣೆ

ವಾಲ್ಮೀಕಿ ನಿಗಮ ಹಗರಣ: ಬಾರ್​, ಚಿನ್ನದಂಗಡಿ ಖಾತೆಗಳಿಗೆ ಅಕ್ರಮ ಹಣ ವರ್ಗಾವಣೆ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮವಾಗಿ ವರ್ಗಾವಣೆಯಾಗಿದ್ದ ಬಹುಕೋಟಿ ಮೊತ್ತ ಮದ್ಯದಂಗಡಿಗಳು, ಚಿನ್ನಾಭರಣ ಮಾರಟ ಮಳಿಗೆಗಳು ಹಾಗೂ ಸಣ್ಣ ಕಂಪನಿಗಳಿಗೆ ವರ್ಗಾಯಿಸಿಕೊಂಡು ನಗದು ಹಣ ಪಡೆದಿರುವುದು ತನಿಖೆಯಲ್ಲಿ ಬಯಲಾಗಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ 94.73 ಕೋಟಿ ರೂ. ಅಕ್ರಮವಾಗಿ 18 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದೆ. ಪ್ರಕರಣ ಸಂಬಂಧ ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಆರೋಪದಡಿ ಎಸ್‌ಐಟಿ ಅಧಿಕಾರಿಗಳು ಹೈದರಾಬಾದ್‌ನಲ್ಲಿ ಸತ್ಯನಾರಾಯಣ ವರ್ಮಾ ಮತ್ತು ಚಂದ್ರಮೋಹನ್‌ ಬಂಧಿಸಿ ಬುಧವಾರ ನಗರಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಈ ಮಾಹಿತಿ ಬಯಲಾಗಿದೆ.

ಸತ್ಯನಾರಾಯಣ ವರ್ಮಾ ಸಂಬಂಧಿಕರ ಮನೆಯಲ್ಲಿ 8.21 ಕೋಟಿ ರೂ. ಪತ್ತೆಯಾಗಿದೆ. ಹಣವನ್ನು 4 ಸೂಟ್ ಕೇಸ್‌ಗಳಲ್ಲಿ ತುಂಬಿಸಿ, ಸಂಬಂಧಿಕರ ಮನೆಯಲ್ಲಿ ಇರಿಸಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಆರೋಪಿಯ ಸಂಬಂಧಿಕರ ಮನೆಗಳಿಗೆ ತೆರಳಿ ಹಣವನ್ನು ಜಪ್ತಿ ಮಾಡಿದ್ದಾರೆ.

ವಂಚಕ ಸತ್ಯನಾರಾಯಣ ವರ್ಮಾ ಓಡಾಡುತ್ತಿದ್ದ ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನೂ ಸಹ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಪ್ರಕರಣದಲ್ಲಿ ಈವರೆಗೆ ಎಸ್​​ಐಟಿ ಅಧಿಕಾರಿಗಳು 94.73 ಕೋಟಿ ಹಣದಲ್ಲಿ ಸುಮಾರು 11.83 ಕೋಟಿ ರೂ, ನಗದು ಜಪ್ತಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments