ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಬ್ಯಾಂಕ್ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಳ್ಳಲು ಕಾನೂನು ಇದೆ. ಅದರಂತೆ ಸಿಬಿಐ ಕೇಸ್ ತೆಗೆದುಕೊಂಡಿದೆ. ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ಕೋಡಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿರುವ ಬಗ್ಗೆ ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಸರ್ಕಾರದ ಇಲಾಖೆಗಳ ತನಿಖೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಸಿಬಿಐ ಪತ್ರ ಬರೆದ ಮೇಲೆ ತೀರ್ಮಾನ ಮಾಡಬೇಕು” ಎಂದರು.
“ಸರ್ಕಾರಕ್ಕೆ ಪತ್ರ ಬರೆದ ಮೇಲೆ ಸಚಿವರ ತನಿಖೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಚಿವರನ್ನು ಕರೆದು ಸಿಬಿಐ ತನಿಖೆ ಮಾಡಬಹುದು. ಅಗತ್ಯ ಬಂದರೆ ಕೇಸ್ ಅನ್ನು ಸಿಬಿಐಗೆ ನಾವೇ ಕೊಡುತ್ತೇವೆ. ಮೊದಲು ಅವರು ಪತ್ರ ಬರೆಯಲಿ. ನಾವು ಕ್ಯಾಬಿನೆಟ್‌ನಲ್ಲಿ ನಿರ್ಧಾರ ಮಾಡುತ್ತೇವೆ” ಎಂದು ಪರಮೇಶ್ವರ್ ಹೇಳಿದರು.
ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿ, “ಬೇರೆ ಬೇರೆ ರೀತಿಯಲ್ಲಿ ಅಂದಾಜು ಮಾಡಿದ್ದೆವು. ಅದು ಏರುಪೇರು ಆಗಿದೆ. 50 ಸಾವಿರದ ಅಂತರದಲ್ಲಿ ಯಾರೆಲ್ಲ ಸೋತಿದ್ದಾರೆಯೋ ಆ ಕ್ಷೇತ್ರಗಳಲ್ಲಿ ಅಲ್ಲಿ ಇನ್ನಷ್ಟು ಎಫರ್ಟ್ ಹಾಕಬೇಕಿತ್ತು. ತುಮಕೂರನಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ನಮ್ಮ ಅಭ್ಯರ್ಥಿ ಸೋತಿದ್ದಾರೆ” ಎಂದು ತಿಳಿಸಿದರು.
“ತುಮಕೂರಿನ ಸೋಲಿನ ಬಗ್ಗೆ ನಾನು ಮತ್ತು ರಾಜಣ್ಣ ನಾಯಕರಿಗೆ ಉತ್ತರ ಕೊಡುತ್ತೇವೆ. ಮೈತ್ರಿ ವರ್ಕೌಟ್ ಆಗಲ್ಲ ಅಂದುಕೊಂಡಿದ್ದೆವು. ತುಮಕೂರಿನಲ್ಲಿ ಇದು ವರ್ಕೌಟ್ ಆಗಿದೆ. ಕೆಲವು ಸಚಿವರಿಗೆ ಹಿನ್ನಡೆ ಆಗಿದೆ. ಅದನ್ನು ಒಪ್ಪಿಕೊಳ್ಳಲೇಬೇಕು” ಎಂದು ಹೇಳಿದರು.
“ಏಕ್ಸಿಟ್ ಪೋಲ್ಗಳಲ್ಲಿ ಫಲಿತಾಂಶ ಏಕಮುಖವಾಗಿದೆ ಎಂದು ಮಾಧ್ಯಮಗಳು ಬಿಂಬಿಸಿದ್ದವು. ಆದರೆ, ಫಲಿತಾಂಶ ಬೇರೆ ತರಹ ಬಂದಿದೆ. ಮೋದಿ 400 ಸ್ಥಾನ ಗೆಲ್ಲುತ್ತಾರೆ ಎಂಬ ನೀರಿಕ್ಷೆ ಸುಳ್ಳಾಗಿದೆ. ಇಂಡಿಯಾ ಒಕ್ಕೂಟ ಹೆಚ್ಚು ಸೀಟ್ ಗೆದ್ದಿದೆ. ವಿರೋಧ ಪಕ್ಷ ಗಟ್ಟಿಯಾಗಿ ಉಳಿಯತ್ತೆ ಅಂತ ತೋರಿಸಿದ್ದಾರೆ. ಮೋದಿಗೆ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ. ಬಿಜೆಪಿಗೆ ಬಹುಮತ ಬಂದಿಲ್ಲ” ಎಂದರು.