Homeಕರ್ನಾಟಕಹಿರಿಯ ಚಿಂತಕ, ಜನಪ್ರಿಯ ಸಾಹಿತಿ ಕೆ ಟಿ ಗಟ್ಟಿ ನಿಧನ

ಹಿರಿಯ ಚಿಂತಕ, ಜನಪ್ರಿಯ ಸಾಹಿತಿ ಕೆ ಟಿ ಗಟ್ಟಿ ನಿಧನ

ಕಾದಂಬರಿಗಳ ಮೂಲಕ ಪ್ರಸಿದ್ಧರಾಗಿದ್ದ, ಸಾಹಿತ್ಯ, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳ ಕುರಿತ ಲೇಖಕ, ನಿವೃತ್ತ ಪ್ರಾಧ್ಯಾಪಕ ಕೆ.ಟಿ.ಗಟ್ಟಿ (86) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.

ಕಾಸರಗೋಡು ಸಮೀಪದ ರಾಮದಾಸನಗರದಲ್ಲಿ 1938ರ ಜುಲೈ 22 ರಂದು ಜನಿಸಿದ ಕೆ.ಟಿ.ಗಟ್ಟಿ ಅವರು ಈಚೆಗೆ ದಕ್ಷಿಣ ಕನ್ನಡದಲ್ಲಿ ನೆಲೆಸಿದ್ದರು. ಕಾಸರಗೋಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು ಕೇರಳದಲ್ಲಿ ಪಿಡಿಸಿ (ಪ್ರಿ ಡಿಗ್ರಿ ಕೋರ್ಸ್‌) ಹಾಗೂ ಬಿ.ಎ ಪದವಿ ಗಳಿಸಿದರು.

ಕಾಸರಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಆರಂಭಿಸಿ, ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ ಸ್ನಾತಕೋತ್ತರ ಪದವಿ ಪಡೆದರು. 1968ರಿಂದ ಮಣಿಪಾಲದ ಎಂಐಟಿ ಸಂಸ್ಥೆಯಲ್ಲಿ ಮತ್ತು ಉಡುಪಿಯ ಟಿಎಂಎ ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದರು. ಇಥಿಯೋಪಿಯಾದಲ್ಲಿದ್ದ ಅವರು ಸ್ವದೇಶಕ್ಕೆ ಮರಳಿದ ನಂತರ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಬಳಿ ‘ವನಸಿರಿ’ಯಲ್ಲಿ ಕೃಷಿ ಮತ್ತು ಸಾಹಿತ್ಯಕೃಷಿಯಲ್ಲಿ ತೊಡಗಿಸಿಕೊಂಡರು.

ಕೆ.ಟಿ. ಗಟ್ಟಿ ಅವರ ತಂದೆ ಧೂಮಪ್ಪ ಗಟ್ಟಿ. ತಾಯಿ ಪರಮೇಶ್ವರಿ. ಧೂಮಪ್ಪ ಅವರು ಯಕ್ಷಗಾನ ಪ್ರಿಯರಾಗಿದ್ದರು. ಯಕ್ಷಗಾನ ಮೇಳದೊಂದಿಗೆ ಒಡನಾಟ ಇದ್ದ ಅವರು ಪರ ಊರಿಗೆ ಹೋಗಿದ್ದಾಗ ಪುಸ್ತಕಗಳನ್ನು ಮನೆಗೆ ತರುತ್ತಿದ್ದರು. ಇದರಿಂದ ಕೆ.ಟಿ.ಗಟ್ಟಿ ಅವರಿಗೆ ಓದುವ ಪ್ರೇರಣೆ ಉಂಟಾಯಿತು. ತಾಯಿ ಹಾಡುತ್ತಿದ್ದ ಪಾಡ್ದನಗಳು ಅವರಲ್ಲಿ ಸಾಹಿತ್ಯ ಒಲವು ಮೂಡಿಸಿದವು.

‘ಝೇಂಕಾರದ ಹಕ್ಕಿ’. ಲಂಡನ್‌ನಲ್ಲಿ ಡಿಪ್ಲೊಮಾ ಪಡೆದ ಅವರ ಸಾಹಿತ್ಯ ಕೃಷಿ ಆರಂಭವಾದದ್ದು 1957ರಲ್ಲಿ. ಅವರ ಮೊದಲ ಕಾದಂಬರಿ ‘ಶಬ್ದಗಳು’ ಧಾರಾವಾಹಿಯಾಗಿ ‘ಸುಧಾ’ ವಾರಪತ್ರಿಕೆಯಲ್ಲಿ 1976ರಲ್ಲಿ ಪ್ರಕಟವಾಯಿತು. 1978ರಲ್ಲಿ ಬರೆದ ‘ಸಾಫಲ್ಯ’ ಕಾದಂಬರಿ ಸೇರಿದಂತೆ 2004ರ ವರೆಗೆ ಸುಮಾರು 14 ಕಾದಂಬರಿಗಳು ಸುಧಾ ವಾರಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿವೆ.

ಮೃತರಿಗೆ ಪತ್ನಿ, ನಿವೃತ್ತ ಶಿಕ್ಷಕಿ ಯಶೋದಾ, ಪುತ್ರ ನಿಟ್ಟೆ ವಿವಿಯಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕ ಸತ್ಯಜಿತ್, ಪುತ್ರಿಯರಾದ ಅಮೆರಿಕದಲ್ಲಿ ಪರಿಸರ ವಿಜ್ಞಾನಿಯಾಗಿರುವ ಪ್ರಿಯದರ್ಶಿನಿ, ಆಸ್ಟ್ರಿಯಾದಲ್ಲಿ ಆಂಥ್ರಾಪಾಲಜಿಸ್ಟ್ ಆಗಿರುವ ಚಿತ್ ಪ್ರಭಾ ಇದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments