Homeಕರ್ನಾಟಕಲೋಕಸಭೆ ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ವಿಜಯೇಂದ್ರ ಮುಂದುವರಿಯಲ್ಲ: ಕೆ ಎಸ್‌ ಈಶ್ವರಪ್ಪ

ಲೋಕಸಭೆ ಚುನಾವಣೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ವಿಜಯೇಂದ್ರ ಮುಂದುವರಿಯಲ್ಲ: ಕೆ ಎಸ್‌ ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸ್ಥಾನ ಬರುವ ದಿನಗಳಲ್ಲಿ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭವಿಶ್ಯ ನುಡಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೈತಪ್ಪಲಿದೆ” ಎಂದರು.

“ನನ್ನ ಪುತ್ರ ಕಾಂತೇಶ್​​ಗೆ ವಿಧಾನ ಪರಿಷತ್​ ಸ್ಥಾನ ಕೊಡುತ್ತೇವೆ ಅಂತ ಹೇಳಿದ್ದರು. ನನ್ನನ್ನು ರಾಜ್ಯಪಾಲರನ್ನಾಗಿ ಮಾಡುತ್ತೇವೆ ಅಂತ ಬಿಜೆಪಿ ವರಿಷ್ಠರು ಹೇಳಿದ್ದರು. ಆದರೆ ನನಗೆ ಸ್ಥಾನಮಾನಗಳು ಬೇಡ, ಪಕ್ಷ ಉಳಿಯಬೇಕು ಅಷ್ಟೆ ಎಂದು ತಿಳಿಸಿದ್ದೇನೆ. ಹೀಗಾಗಿ ನಾನು ಸ್ಪರ್ಧಿಸುತ್ತಿರುವೆ. ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ. ನನ್ನ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗುತ್ತಿದೆ” ಎಂದರು.

ಒಂದು ಅವಧಿಗೆ ನೇಮಕ ಮಾಡಿದ್ದಾರೆ: ವಿಜಯೇಂದ್ರ

ಕೆ ಎಸ್‌ ಈಶ್ವರಪ್ಪ ಹೇಳಿಕೆಗೆ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, “ಈಶ್ವರಪ್ಪ ಅವರ ಹೇಳಿಕೆಗೆ ನಾನು ಹೆಚ್ಚು ಪ್ರತಿಕ್ರಿಯಿಸಲ್ಲ. ಒಂದು ಅವಧಿಗೆ ನನ್ನನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಅಂತ ಭಾವಿಸುತ್ತೇನೆ. ನನಗೆ ಸ್ಥಾನಮಾನ ಬೇಡ, ಪಕ್ಷ ಉಳಿಯಬೇಕು ಅಷ್ಟೆ” ಎಂದು ತಿಳಿಸಿದರು.

“ಬಂಡಾಯ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ. ಯಾವುದೇ ಕ್ಷೇತ್ರದಲ್ಲಿ ಒಮ್ಮತದ ನಿರ್ಧಾರ ಆಗುವುದಿಲ್ಲ. ಆಕಾಂಕ್ಷಿಗಳ ಪಟ್ಟಿ ಬಹಳ ದೊಡ್ಡದಾಗಿದೆ. ಘೋಷಣೆ ಆಗಿರುವ ಅಭ್ಯರ್ಥಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ” ಎಂದರು.

“ಸಭೆಯಲ್ಲಿ ಬಾಕಿ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ. ಮಾ.22ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಬಾಕಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ. ಆ ಬಳಿಕ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ. ಸಭೆಯಲ್ಲಿ ಚರ್ಚಿಸಲಾದ ಎಲ್ಲ ವಿಷಯಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಆಗುವುದಿಲ್ಲ” ಎಂದು ಹೇಳಿದರು.‌

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments