Homeಕರ್ನಾಟಕನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ, ಸ್ಪೀಕರ್ ಘನತೆ ಹಾಳು ಮಾಡಬೇಡಿ: ಸಿ ಟಿ ರವಿ

ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ, ಸ್ಪೀಕರ್ ಘನತೆ ಹಾಳು ಮಾಡಬೇಡಿ: ಸಿ ಟಿ ರವಿ

ವಿಧಾನಸಭೆಯ ಸಭಾಧ್ಯಕ್ಷ ಸ್ಥಾನ ಎಂಬುದು ಮಸೀದಿಯ ಮೌಲ್ವಿಯ ಹುದ್ದೆಯಲ್ಲ. ಸ್ಪೀಕರ್​ಗೆ ಸಿಗುವ ಗೌರವ ಜಾಮಿಯಾ ಮಸೀದಿ ಮುಲ್ಲಾನಿಗೆ ಸಿಗುವ ಗೌರವ ಅಲ್ಲ ಎಂದು ಬಿಜೆಪಿ ನಾಯಕ ಸಿ ಟಿ ರವಿ ಹೇಳಿದ್ದಾರೆ.

ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಅವರು, “ಸಭಾಧ್ಯಕ್ಷ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಕೆಳಗೆ ಇಳಿಸುವ ಕೆಲಸ ಮಾಡಬೇಡಿ” ಎಂದರು.

ಸ್ಪೀಕರ್ ಯು ಟಿ ಖಾದರ್ ಅವರ ಘನತೆಯನ್ನು ಹಾಳು ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂತವರು ಸಚಿವರಾದರೆ ಹೀಗೆಯೇ ಆಗುವುದು” ಎಂದು ಹರಿಗಾಯ್ದಿದ್ದಾರೆ.

ಆರ್‌ ಅಶೋಕ್‌ ವಿಚಾರವಾಗಿ ಮಾತನಾಡಿದ ಅವರು, “ರಾಜ್ಯ ಬಿಜೆಪಿಗೆ ನಾಯಕನನ್ನು ಆಯ್ಕೆ ಮಾಡಲಾಗಿದೆ. ಅಶೋಕ ಸಮರ್ಥ ವಿಪಕ್ಷ ನಾಯಕನಾಗಿ ಎಲ್ಲ ಟೀಕೆಗೆ ಉತ್ತರಿಸುತ್ತಾರೆ. ನಾಯಕರಾದ ನಿರ್ಮಲಾ ಸೀತಾರಾಮನ್, ದುಷ್ಯಂತ್ ಜೊತೆ ನಮ್ಮೆಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ನಮ್ಮೆಲ್ಲ ಶಾಸಕರ ಜೊತೆ ಮಾತನಾಡಿ ನಿರ್ಣಯವಾಗಿದೆ” ಎಂದರು.

ಬಿಜೆಪಿಯಿಂದ ಉತ್ತರ ಕರ್ನಾಟಕ ನಿರ್ಲಕ್ಷ ಮಾಡಲಾಗುತ್ತಿದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿ, “ನಾಯಕರ ಆಯ್ಕೆಯಲ್ಲಿ ಯಾವ ಭಾಗ ಎಂಬುದು ಬರಲ್ಲ. ಉತ್ತರ ಕರ್ನಾಟಕದವರಾದ ಬೊಮ್ಮಯಿ ಎರಡು ವರ್ಷ ಸಿಎಂ ಆಗಿದ್ದರು. ವಿಪಕ್ಷ ನಾಯಕನ, ರಾಜ್ಯಧ್ಯಕ್ಷರ ಆಯ್ಕೆ ಸಮಗ್ರ ಕರ್ನಾಟಕಕ್ಕೆ ನಡೆದ ಆಯ್ಕೆಯಾಗಿದೆ” ಎಂದು ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಬಿ ವೈ ವಿಜಯೇಂದ್ರ ನೇಮಕ ವಿಚಾರವಾಗಿ ಪ್ರತಿಕ್ರಿಯಿಸಿ, “ನಾನು ರೇಸ್​ನಲ್ಲಿ ಇಲ್ಲ ಎಂದು ಮೂರು ತಿಂಗಳ ಹಿಂದೆಯೇ ಸ್ಪಷ್ಟಪಡಿಸಿದ್ದೆ. ರೇಸಲ್ಲೇ ಇಲ್ಲ ಅಂದಮೇಲೆ ಬೇಸರದ ಪ್ರಶ್ನೆ ಬರಲ್ಲ. ಜವಾಬ್ದಾರಿ ಯಾವಾಗ ಯಾರಿಗೆ ಕೊಡಬೇಕು ಎಂದು ವರಿಷ್ಠರು ತೀರ್ಮಾನಿಸುತ್ತಾರೆ. ನಾವು ತಂಡವಾಗಿ ಕೆಲಸ ಮಾಡುತ್ತೇವೆ, ಚರ್ಚೆ ಮಾಡಲು ಬಯಸಲ್ಲ” ಎಂದರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನೀವು ಟಿಕೆಟ್ ಆಕಾಂಕ್ಷಿಯಾ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು 1994 ರ ನಂತರ ಯಾವುದೇ ಸ್ಥಾನ ಕೇಳಿ ಪಡೆದಿಲ್ಲ. ನಾನು ಆಕಾಂಕ್ಷಿಯಲ್ಲ, ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಪಕ್ಷದ ಗೆಲುವಿಗೆ ಶಕ್ತಿಮೀರಿ ಶ್ರಮ ಹಾಕುತ್ತೇನೆ” ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments