Homeದೇಶಪಹಲ್ಗಾಮ್‌ ದಾಳಿಯ ಭಯೋತ್ಪಾದಕರನ್ನು ಹುಡುಕಿ ಹೊಡೆಯುತ್ತೇವೆ: ಅಮಿತ್‌ ಶಾ

ಪಹಲ್ಗಾಮ್‌ ದಾಳಿಯ ಭಯೋತ್ಪಾದಕರನ್ನು ಹುಡುಕಿ ಹೊಡೆಯುತ್ತೇವೆ: ಅಮಿತ್‌ ಶಾ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ಭಯೋತ್ಪಾದಕರು ನಡೆಸಿದ ಹೇಯ, ನೀಚ ಕೃತ್ಯಕ್ಕೆ ಭಾರತ ಪ್ರತೀಕಾರ ತೀರಿಸಿಕೊಳ್ಳಲಿದೆ. ದಾಳಿ ನಡೆಸಿದ ಭಯೋತ್ಪಾದಕರನ್ನು ಸುಮ್ಮನೆ ಬಿಡುವುದಿಲ್ಲ. ದಾಳಿಯಲ್ಲಿ ಭಾಗಿಯಾದ ಪ್ರತಿಯೊಬ್ಬನನ್ನು ಹುಡುಕಿ ಹೊಡೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೋಡೋಫಾ ಉಪೇಂದ್ರನಾಥ ಬ್ರಹ್ಮ ಅವರ ರಸ್ತೆಯನ್ನು ಲೋಕಾರ್ಪಣೆ ಮಾಡಿ ಪ್ರತಿಮೆಯನ್ನು ಅನಾವರಣಗೊಳಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, “ಪಹಲ್ಗಾಮ್‌ನಲ್ಲಿ ನಾಗರಿಕರನ್ನು ಕೊಂದ ಪ್ರತಿಯೊಬ್ಬ ಉಗ್ರನನ್ನೂ ಶಿಕ್ಷಿಸಲಾಗುವುದು. ನರೇಂದ್ರ ಮೋದಿ ಸರ್ಕಾರವು ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಿದೆ” ಎಂದಿದ್ದಾರೆ.

ಪಹಲ್ಗಾಮ್ ದಾಳಿಯ ಬಗ್ಗೆ ಇದು ಅಮಿತದ ಶಾ ಅವರ ಮೊದಲ ಸಾರ್ವಜನಿಕ ಹೇಳಿಕೆಯಾಗಿದೆ. “140 ಕೋಟಿ ಭಾರತೀಯರು ಮಾತ್ರವಲ್ಲದೆ ಇಡೀ ಜಗತ್ತು ಭಯೋತ್ಪಾದನೆಯ ವಿರುದ್ದದ ಹೋರಾಟದಲ್ಲಿ ಭಾರತದೊಂದಿಗೆ ನಿಂತಿದೆ. ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ. ಭಯೋತ್ಪಾದನೆಯಲ್ಲಿ ತೊಡಗಿರುವವರನ್ನು ಖಂಡಿತವಾಗಿಯೂ ಶಿಕ್ಷಿಸುತ್ತೇವೆ’ ಎಂದು ಅವರು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments