Homeಕರ್ನಾಟಕಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು , “ಕುಮಾರಸ್ವಾಮಿ ಅಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ” ಎಂದು ತಿರುಗೇಟು ನೀಡಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ವಿಪಕ್ಷಗಳು ತಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಗ್ಯಾರಂಟಿಗಳನ್ನು ನೀಡಿಲ್ಲವಾದ್ದರಿಂದ ಅವರಿಗೆ ಈ ಯೋಜನೆಗಳು ನುಂಗಲಾರದ ತುತ್ತಾಗಿವೆ” ಎಂದರು.

ಜನವರಿ 22ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ. ಬಿಜೆಪಿ ರಾಜಕೀಯ ಮಾಡಲು ಹೊರಟಿದೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದ್ದಾರೆ. ದೇವರನ್ನು ರಾಜಕೀಯವಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀರಾಮಚಂದ್ರನನ್ನು ವಿರೋಧಿಸುವುದಿಲ್ಲ” ಎಂದರು.

ಮೂವರು ಡಿಸಿಎಂ: ಚರ್ಚಿಸುವುದಿಲ್ಲ

ಮೂರು ಡಿಸಿಎಂ ಸ್ಥಾನದ ಬಗ್ಗೆ ಪ್ರಶ್ನೆ ಕೇಳಿದ ಮಾಧ್ಯಮದವರಿಗೆ ಈ ಬಗ್ಗೆ ಚರ್ಚಿಸುವುದಿಲ್ಲ ಎಂದು ಉತ್ತರ ನೀಡಲು ಮುಖ್ಯಮಂತ್ರಿಗಳು ನಿರಾಕರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments