Homeಕರ್ನಾಟಕಭಯೋತ್ಪಾದಕರಿಗೆ ಪಶ್ಚಿಮ ಬಂಗಾಳ ಸುರಕ್ಷಿತ ರಾಜ್ಯ: ಆರ್‌ ಅಶೋಕ್ ಆರೋಪ

ಭಯೋತ್ಪಾದಕರಿಗೆ ಪಶ್ಚಿಮ ಬಂಗಾಳ ಸುರಕ್ಷಿತ ರಾಜ್ಯ: ಆರ್‌ ಅಶೋಕ್ ಆರೋಪ

ಬೆಂಗಳೂರಿನ ಬಾಂಬ್‌ ಸ್ಫೋಟದ ತನಿಖೆಯನ್ನು ಕಾಂಗ್ರೆಸ್‌ ನಾಯಕರು, ಸಚಿವರು ತಿರುಚಲು ಯತ್ನಿಸಿದ್ದಾರೆ. ಆದರೆ ಎನ್‌ಐಎ ತಂಡ ಸೂಕ್ತ ತನಿಖೆ ನಡೆಸಿರುವುದು ಅಭಿನಂದನೀಯ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಭಯೋತ್ಪಾದಕ ದಾಳಿಯಿಂದ ರಾಜ್ಯದ ಜನರು ಆತಂಕಗೊಂಡಿದ್ದರು. ಆದರೆ ಸೂಕ್ತ ಸಮಯದಲ್ಲೇ ಉಗ್ರರನ್ನು ಬಂಧಿಸಿ ಮುಂದಿನ ಅನಾಹುತಗಳನ್ನು ಎನ್‌ಐಎ ತಪ್ಪಿಸಿದೆ” ಎಂದರು.

“ಕಾಂಗ್ರೆಸ್‌ ನಾಯಕರು ಈ ಘಟನೆಯನ್ನು ತಿರುಚುವ ಕೆಲಸ ಮಾಡಿದ್ದರು. ಅಲ್ಪಸಂಖ್ಯಾತರಿಗೆ ನೋವಾದರೆ ಮತಬ್ಯಾಂಕ್‌ ತಪ್ಪುತ್ತದೆ ಎಂಬ ಕಾರಣಕ್ಕೆ ಪೊಲೀಸರ ಮೇಲೆ ಒತ್ತಡ ಹಾಕಿದ್ದರು. ಇದು ವೈಯಕ್ತಿಕ, ವ್ಯಾಪಾರ ಸಂಬಂಧಿ ದ್ವೇಷ ಎನ್ನುವಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದ್ದರು. ಅದರಂತೆ ಪೊಲೀಸರು ಕೂಡ ನಡೆದುಕೊಂಡರು” ಎಂದು ಆರೋಪಿಸಿದರು.

“ಹಿಂದೆ ಕುಕ್ಕರ್‌ ಸ್ಪೋಟ ಆದಗಾಲೂ ಮಧ್ಯಪ್ರವೇಶ ಮಾಡಿದ ಡಿ ಕೆ ಶಿವಕುಮಾರ್‌, ನನ್ನ ಬ್ರದರ್‌ ಎಂದಿದ್ದರು. ರಾಜ್ಯ ಸರ್ಕಾರ ಈ ರೀತಿ ನಿರ್ದೇಶನ ನೀಡಿದ್ದರಿಂದ ಪೊಲೀಸರಿಗೆ ಯಾವುದೇ ಸುಳಿವು ಸಿಗಲಿಲ್ಲ. ಆದರೆ ಎನ್‌ಐಎ ಬಂದ ಬಳಿಕ ಭಯೋತ್ಪಾದಕ ಚಟುವಟಿಕೆ ಬಯಲಾಗಿದೆ” ಎಂದರು.

“ಕಾಂಗ್ರೆಸ್‌ನ ಸಹೋದರಿ ಮಮತಾ ಬ್ಯಾನರ್ಜಿಯವರ ರಾಜ್ಯದಲ್ಲೇ ಭಯೋತ್ಪಾದಕರು ಸಿಕ್ಕಿದ್ದಾರೆ. ಇಲ್ಲಿ ಬ್ರದರ್‌ಗಳಿದ್ದರೆ, ಅಲ್ಲಿ ಸಿಸ್ಟರ್‌ ಬಳಿಯೇ ಉಗ್ರರು ಸಿಕ್ಕಿದ್ದಾರೆ. ಭಯೋತ್ಪಾದಕರಿಗೆ ಪಶ್ಚಿಮ ಬಂಗಾಳ ಸುರಕ್ಷಿತ ಸ್ಥಳವಾಗಿದೆ. ಎನ್‌ಐಎ ತಂಡ ಸಾಯಿ ಪ್ರಸಾದ್‌ ಎಂಬುವರನ್ನು ತನಿಖೆಗೆ ಕರೆದರೆ ಸಚಿವ ದಿನೇಶ್‌ ಗುಂಡೂರಾವ್‌ ಅದನ್ನೇ ಹಿಡಿದುಕೊಂಡು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದರು” ಎಂದು ಕಿಡಿಕಾರಿದರು.

“ವಿಧಾನಸೌಧದಲ್ಲಿ ಪಾಕ್‌ ಜಿಂದಾಬಾದ್‌ ಕೂಗಿದ ದೇಶದ್ರೋಹಿ ಘಟನೆಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ತಿರುಚಲು ಯತ್ನಿಸಿದ್ದರು. ಕೆಜಿ ಹಳ್ಳಿ, ಡಿಜೆ ಹಳ್ಳಿ ಘಟನೆ ಕೂಡ ಭಯೋತ್ಪಾದಕ ಘಟನೆಯಂತೆಯೇ ಇತ್ತು. ಸಂಪತ್‌ ರಾಜ್‌ ಜೈಲಿಗೆ ಹೋಗಿ ಬಂದರೂ ಮಂಡಳಿಯ ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದಾರೆ. ಆದರೆ ದಲಿತ ಶಾಸಕನ ಮನೆಗೆ ಬೆಂಕಿ ಹಾಕಿದರೂ ಕ್ರಮ ಕೈಗೊಳ್ಳಲಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಸಂವಿಧಾನ ಭಗವದ್ಗೀತೆ

“ಬಿಜೆಪಿಯ ಪಾಲಿಗೆ ಸಂವಿಧಾನವು ಭಗವದ್ಗೀತೆಯಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ಕಾಂಗ್ರೆಸ್‌ನವರು ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷ ದುರ್ಬಲವಾಗಿರುವುದರಿಂದ ಅವರಿಗೆ ದುರ್ಬಲ ದೇಶವೇ ಬೇಕಿದೆ. ಭಾರತ ಬಲಿಷ್ಠವಾಗುವುದು ಕಾಂಗ್ರೆಸ್‌ಗೆ ಬೇಕಿಲ್ಲ” ಎಂದು ಅಶೋಕ್ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments