Homeಕರ್ನಾಟಕಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿ.ಕೆ.ಶಿವಕುಮಾರ್

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿ.ಕೆ.ಶಿವಕುಮಾರ್

ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ಹಾಕುವುದಕ್ಕೆ ಈ ವಿಧಾನ ಬಳಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಶನಿವಾರ ಮುಂಜಾನೆ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಅವರು ಪ್ರತಿಕ್ರಿಯಿಸಿದರು.

ಮಾರತ್ ಹಳ್ಳಿ ಬಳಿ ಮಳೆಯಲ್ಲೇ ಡಾಂಬರು ಹಾಕುತ್ತಿದ್ದ ಬಗ್ಗೆ ಕೇಳಿದಾಗ, “ನಗರದಾದ್ಯಂತ ರಾತ್ರಿಯೆಲ್ಲಾ ಜೋರಾಗಿ ಮಳೆ ಸುರಿದಿದೆ. ನಮ್ಮ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಎಲ್ಲಿಯೂ ಅವಘಡಗಳು ನಡೆದ ಸುದ್ದಿಗಳು ವರದಿಯಾಗಿಲ್ಲ. ಒಂದಷ್ಟು ಕಡೆ ಮಾತ್ರ ನೀರಿನ ಹರಿವಿಗೆ ಅಡಚಣೆ ಉಂಟಾಗಿದೆ” ಎಂದರು.

ಒಂದು ವಾರಗಳ ಹಿಂದೆ ಮುಚ್ಚಿದ್ದ ರಸ್ತೆಗುಂಡಿಗಳು ಮಳೆಗೆ ಮತ್ತೆ ಹಾಳಾಗಿರುವ ಬಗ್ಗೆ ಕೇಳಿದಾಗ, “ಮಳೆ ಬಂದಾಗ ಈ ರೀತಿ ತೊಂದರೆಯಾಗುತ್ತದೆ, ಸಮಸ್ಯೆ ಬಗೆ ಹರಿಸಲಾಗುವುದು” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments