Homeಕರ್ನಾಟಕಕುಮಾರಸ್ವಾಮಿಗೆ ಕೆಆರ್‌ಎಸ್‌ನಲ್ಲಿ ಏನು ಸಮಸ್ಯೆ ಕಂಡಿದೆ: ಡಿ ಕೆ ಶಿವಕುಮಾರ್‌ ಪ್ರಶ್ನೆ

ಕುಮಾರಸ್ವಾಮಿಗೆ ಕೆಆರ್‌ಎಸ್‌ನಲ್ಲಿ ಏನು ಸಮಸ್ಯೆ ಕಂಡಿದೆ: ಡಿ ಕೆ ಶಿವಕುಮಾರ್‌ ಪ್ರಶ್ನೆ

ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕಾರ್ಯ ಆರಂಭವಾಗಿದೆ. ನೀರಿನ ಪ್ರಮಾಣ ಕಡಿಮೆ ಮಾಡದ ಹೊರತಾಗಿ ದುರಸ್ತಿ ಕಾರ್ಯ ಸಾಧ್ಯವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ನಾನು ಅಣೆಕಟ್ಟಿಗೆ ಭೇಟಿ ನೀಡಿ ಬಂದಿದ್ದೇನೆ. ಜಿಂದಾಲ್ ಕಂಪೆನಿ ಹಾಗೂ ಇತರರ ಜತೆ ಮಾತನಾಡಿದ್ದೇನೆ. ಕೆಲವೇ ಕ್ಷಣಗಳಲ್ಲಿ ಕೆಲಸ ಆರಂಭವಾಗಿರುವ ಬಗ್ಗೆ ಮಾಹಿತಿ ಕಳುಹಿಸಿಕೊಡುತ್ತೇನೆ” ಎಂದು ತಿಳಿಸಿದರು.

ಈ ಘಟನೆಗೆ ಯಾರನ್ನಾದರೂ ಹೊಣೆ ಮಾಡಿದ್ದೀರಾ ಎಂದು ಕೇಳಿದಾಗ, “ಅಧಿಕಾರಿಗಳನ್ನು ಹೊಣೆ ಮಾಡುವುದಕ್ಕಿಂತ ಆಣೆಕಟ್ಟು ಉಳಿಸಿ, ರೈತರನ್ನು ರಕ್ಷಣೆ ಮಾಡುವುದು ನಮ್ಮ ಆದ್ಯತೆ. ಆನಂತರ ಅಧಿಕಾರಿಗಳ ವಿಚಾರ. ಮೊದಲು ಸಮಸ್ಯೆ ಬಗೆಹರಿಸುವುದು ಮುಖ್ಯ. ಇದು 70 ವರ್ಷಗಳ ಹಳೆಯ ಅಣೆಕಟ್ಟು. ಅದರ ಸರಪಳಿ ಕಟ್ ಆಗಿದೆ. ಬೇರೆ ಕಡೆಗಳಲ್ಲಿ ಎರಡು ಅವಕಾಶವಿರುತ್ತದೆ. ರೈತರಿಗೆ ನೀರು ಉಳಿಸುವುದಕ್ಕಾಗಿ ಗೇಟ್ ಹಾಕಲು ಪ್ರಯತ್ನ ಮಾಡುತ್ತಿದ್ದೇವೆ. ಅಣೆಕಟ್ಟಿನಲ್ಲಿ ನೀರು ಕಡಿಮೆಯಾಗದ ಹೊರತು ಕೆಲಸ ಮಾಡಲು ಸಾಧ್ಯವಿಲ್ಲ. ಹೀಗಾಗಿ ನೀರು ಹರಿಯಲಿದೆ. ದ್ವಿಗುಣ ಸಿಬ್ಬಂದಿ ನಿಯೋಜಿಸಿ ಹಗಲು ರಾತ್ರಿಯಿಡಿ ತ್ವರಿತಗತಿಯಲ್ಲಿ ಗೇಟ್ ಸಿದ್ಧಪಡಿಸಲಾಗುತ್ತಿದೆ” ಎಂದು ಹೇಳಿದರು.

ಕೆಆರ್ ಎಸ್ ನಲ್ಲೂ ಸಮಸ್ಯೆಯಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ ಎಂದು ಕೇಳಿದಾಗ, “ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಕುಮಾರಸ್ವಾಮಿಗೆ ಕೆಆರ್ ಎಸ್ ನಲ್ಲಿ ಏನು ಸಮಸ್ಯೆಯಿದೆ? ಎಲ್ಲ ಅಣೆಕಟ್ಟುಗಳ ಸುರಕ್ಷತೆಗೆ ಸಮಿತಿ ರಚಿಸಿ ಅಣೆಕಟ್ಟುಗಳ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಲಾಗಿದೆ. ಯಾವುದೇ ರೈತರನ್ನು ಗಾಬರಿಪಡಿಸುವ ಅಗತ್ಯವಿಲ್ಲ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments