Homeಕರ್ನಾಟಕಐಷಾರಾಮಿ ವಿಮಾನ ಸಂಚಾರ | ನರೇಂದ್ರ ಮೋದಿ ಯಾವುದರಲ್ಲಿ ತಿರುಗಾಡುತ್ತಾರೆ: ಸಿದ್ದರಾಮಯ್ಯ ಪ್ರಶ್ನೆ

ಐಷಾರಾಮಿ ವಿಮಾನ ಸಂಚಾರ | ನರೇಂದ್ರ ಮೋದಿ ಯಾವುದರಲ್ಲಿ ತಿರುಗಾಡುತ್ತಾರೆ: ಸಿದ್ದರಾಮಯ್ಯ ಪ್ರಶ್ನೆ

ಜಮೀರ್‌ ಅಹ್ಮದ್‌ ಅವರ ಜೊತೆ ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿರುವ ಕುರಿತು ಬಿಜೆಪಿಯವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, “ಪ್ರಧಾನಿ ನರೇಂದ್ರ ಮೋದಿಯವರು ಯಾವುದರಲ್ಲಿ ತಿರುಗಾಡುತ್ತಾರೆ ಎಂಬುದನ್ನು ಅವರಿಗೇ ಕೇಳಿ” ಎಂದು ಕುಟುಕಿದ್ದಾರೆ.

ಸಂಸದರ ಅಮಾನತ್ತು : ಪ್ರಜಾಪ್ರಭುತ್ವದ ಕಗ್ಗೊಲೆ

“ಸಂಸತ್ತಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ” ಎಂದರು.

“ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು ಪ್ರಭಾಪ್ರಭುತ್ವವನ್ನು ಹಾಗೂ ಜನರ ಭಾವನೆಯನ್ನು ಗೌರವಿಸುತ್ತಿಲ್ಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜನರು ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.

‘ಇಂಡಿಯ’ ಸಭೆಯಲ್ಲಿ ತೀರ್ಮಾನ

‘ಇಂಡಿಯ’ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಪ್ರಸ್ತಾಪ ಮಾಡಲಾಗಿರುವ ಕುರಿತು ಅಭಿಪ್ರಾಯ ಕೇಳಿದ್ದಕ್ಕೆ, “ಇಂಡಿಯ ಸಭೆಯಲ್ಲಿ ತೀರ್ಮಾನ ಮಾಡಬೇಕು” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments