ನಟ ದರ್ಶನ್ ಪಡೆದಿರುವ ಜಾಮೀನು ಯಾಕೆ ರದ್ದು ಮಾಡಬಾರದು ದರ್ಶನ್ ಪರ ವಕೀಲರನ್ನು ಪ್ರಶ್ನಿಸಿ ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.
ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದ ನ್ಯಾಯಮೂರ್ತಿ ಪರ್ದಿವಾಲಾ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ಗೆ ಪ್ರಶ್ನಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಾಜ್ಯ ಪೊಲೀಸ್ ಇಲಾಖೆಯ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ನಡೆಸಿತು. ಜಸ್ಟೀಸ್ ಜೆ.ಬಿ.ಪರ್ದಿವಾಲಾ ಅವರ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಿತು.
ಹೈಕೋರ್ಟ್ ತೀರ್ಪಿನ ಬಗ್ಗೆ ಪರಿಶೀಲಿಸಿರುವ ಸುಪ್ರೀಂ ಕೋರ್ಟ್ ಬದಲಾವಣೆಯ ಬಗ್ಗೆ ಪರೋಕ್ಷವಾಗಿ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು ಜುಲೈ 22ರಂದೇ ಅಂತಿಮ ವಿಚಾರಣೆ ನಡೆಸಿ ಅಂದೇ ಆದೇಶ ನೀಡುವುದಾಗಿ ಹೇಳಿದೆ. ಹೀಗಾಗಿ ದರ್ಶನ, ಪವಿತ್ರಾಗೌಡ ಸೇರಿ ಏಳು ಮಂದಿಯ ಭವಿಷ್ಯ 22ರಂದು ನಿರ್ಧಾರವಾಗಲಿದೆ.
ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದ ನ್ಯಾಯಮೂರ್ತಿ ಪರ್ದಿವಾಲಾ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ಗೆ ಪ್ರಶ್ನಿಸಿದರು. ಇದಕ್ಕೆ ಪ್ರತಿಯಾಗಿ ಕಪಿಲ್ ಸಿಬಲ್ ವಾದ ಮಂಡಿಸಲು ಮುಂದಾದರು. ಆದರೆ ನ್ಯಾಯಮೂರ್ತಿಗಳು ಜುಲೈ 22ರಂದೇ ನಿಮ್ಮ ವಾದ ಮಂಡಿಸಿ ಎಂದು ಹೇಳಿದರು.