ಬಸ್ ಪ್ರಯಾಣ ದರ ಏರಿಕೆಗೆ ಕೆಎಸ್‌ಆರ್‌ಟಿಸಿ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಬಸ್ ಟಿಕೆಟ್ ದರ ಏರಿಕೆಗೆ ತೀರ್ಮಾನ ನಾವಿನ್ನು ಮಾಡಿಲ್ಲ. ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
ಕೆಎಸ್‌ಆರ್‌ಟಿ ಸಿ ಬಸ್ ಪ್ರಯಾಣ ದರ ಶೇ.15 ರಿಂದ ಶೇ.20 ರಷ್ಟು ಏರಿಕೆಗೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಎನ್ನಲಾಗಿರುವ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರು ಶನಿವಾರ ಶನಿವಾರ ಪ್ರಶ್ನಿಸಿದಾಗ ಉತ್ತರಿಸಿದರು.
“ಸಿಬ್ಬಂದಿ ವೇತನ, ಡೀಸೆಲ್, ಬಿಡಿ ಭಾಗಗಳ ಬೆಲೆ ಹೆಚ್ಚಳದಿಂದ ನಿಗಮಗಳು ಆರ್ಥಿಕವಾಗಿ ಸದೃಢವಾಗಿಲ್ಲ. ಹೀಗಾಗಿ ಶೇ.15 ರಿಂದ ಶೇ.20 ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಬಂದಿದೆ. ಕೆಲವೇ ದಿನಗಳಲ್ಲಿ ಸಿಎಂ ಸಭೆ ನಡೆಸಿ ದರ ಹೆಚ್ಚಳ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ” ಎಂದರು.