Homeಕರ್ನಾಟಕಚಳಿಗಾಲ ಅಧಿವೇಶನ: ಸುವರ್ಣಸೌಧ ಬಳಿ ಪೊಲೀಸ್ ವಾಸ್ತವ್ಯಕ್ಕೆ ಜರ್ಮನ್ ಟೆಂಟ್ ಟೌನ್ ಶಿಪ್

ಚಳಿಗಾಲ ಅಧಿವೇಶನ: ಸುವರ್ಣಸೌಧ ಬಳಿ ಪೊಲೀಸ್ ವಾಸ್ತವ್ಯಕ್ಕೆ ಜರ್ಮನ್ ಟೆಂಟ್ ಟೌನ್ ಶಿಪ್

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ ವಿಧಾನಸಭಾ ಚಳಿಗಾಲದ ಅಧಿವೇಶನದ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ‌ಕ್ರಮಗಳನ್ನು ಕೈಗೊಂಡಿದ್ದು 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಎಸ್ ಎನ್ ಸಿದ್ರಾಮಪ್ಪ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ 15 ರವರೆಗೆ ನಡೆಯಲಿರುವ ವಿಧಾನಸಭಾ ಚಳಿಗಾಲದ ಅಧಿವೇಶನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು ಭದ್ರತೆಗಾಗಿಯೇ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

“5 ಸಾವಿರಕ್ಕೂ ಹೆಚ್ಚು ಸಂಖ್ಯೆಯ ಪೊಲೀಸರ ವಾಸ್ತವ್ಯಕ್ಕೆ ನಾಲ್ಕು ದೊಡ್ಡ ದೊಡ್ಡ ಜರ್ಮನ್ ಟೆಂಟ್ ನೊಂದಿಗೆ ಬೃಹತ್ ಟೌನ್ ಶಿಪ್ ನಿರ್ಮಿಸಲಾಗಿದೆ. ಸುವರ್ಣ ವಿಧಾನ ಸೌಧದ ಅಲಾರವಾಡ ಬಳಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವ ಬೃಹತ್ ಟೌನ್ ಶಿಪ್ ನಲ್ಲಿ ಬಂದೋಬಸ್ತ್‌ಗೆ ರಾಜ್ಯದ ನಾನಾ ಜಿಲ್ಲೆಗಳಿಂದ ಬರುವ ಪೊಲೀಸ್ ಸಿಬ್ಬಂದಿಗೆ ವಾಸ್ತವ್ಯಕ್ಕೆ ಅನುವು ಮಾಡಿಕೊಡಲಾಗುವುದು” ಎಂದು ಹೇಳಿದರು.

“ಈ ಟೌನ್ ಶಿಪ್ ನಿರ್ಮಾಣ ಕೆಲಸವನ್ನು ಮೈಸೂರಿನ ಕೆ.ಎಂ ಶರೀಫ್ ಎನ್ನುವರು ತೆಗೆದುಕೊಂಡಿದ್ದು, ಹದಿಮೂರು ದಿನಗಳಿಂದ 100 ಜನ ಕಾರ್ಮಿಕರು ಈ ಟೆಂಟ್ ನಿರ್ಮಾಣದಲ್ಲಿ ತೊಡಗಿದ್ದು, ಟೆಂಟ್‌ನ ಕೊನೆಯ ಹಂತದ ಕೆಲಸಗಳು ಭರದಿಂದ ಸಾಗಿವೆ” ಎಂದರು.

ಜರ್ಮನ್ ಟೆಂಟ್

“ನಾಲ್ಕು ದೊಡ್ಡ ದೊಡ್ಡ ಜರ್ಮನ್ ಟೆಂಟ್ ಹಾಕಿ ಒಂದು ಚಿಕ್ಕ ಟೆಂಟ್ ಹಾಕಿ ಟೌನ್ ಶಿಪ್ ನಿರ್ಮಾಣ ಮಾಡಲಾಗಿದ್ದು, ಒಂದು ಜರ್ಮನ್ ಟೆಂಟ್ 100 ಅಡಿ ಅಗಲ, 200 ಅಡಿ ಉದ್ದ ಇರಲಿದೆ. ಇದೇ ಮಾದರಿಯ ಒಟ್ಟು ನಾಲ್ಕು ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದೆ. ಅಧಿಕಾರಿಗಳಿಗೆ ಒಂದು ಸಣ್ಣ-ಸಣ್ಣ ಟೆಂಟ್ ಸಹ ನಿರ್ಮಿಸಲಾಗಿದೆ. ಇನ್ನು ಒಂದೊಂದು ಟೌನ್ ಶಿಪ್ ನಲ್ಲಿ ಐನೂರು ಮಂದಿ ಸಿಬ್ಬಂದಿಗೆ ಮಲಗಲು ವ್ಯವಸ್ಥೆ ಮಾಡಲಾಗಿದೆ. ವಾಟರ್ ಪ್ರೂಫ್ ಟೆಂಟ್ ಇದಾಗಿದ್ದು, ಒಟ್ಟು 2000 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಇಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕಾಟ್, ಗಾದೆ, ತಲೆ ದಿಂಬು, ಬೆಡ್ ಶೀಟ್ ನೀಡಲಾಗುತ್ತದೆ. ಹಾಗೇ ಚಾರ್ಜಿಂಗ್ ವ್ಯವಸ್ಥೆ ಕೂಡ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments