Homeಕರ್ನಾಟಕಜನರ ಆಶೀರ್ವಾದದಿಂದ ಸಿಎಂ ಆಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ: ಸಿದ್ದರಾಮಯ್ಯ

ಜನರ ಆಶೀರ್ವಾದದಿಂದ ಸಿಎಂ ಆಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ: ಸಿದ್ದರಾಮಯ್ಯ

ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು.

ಕ್ಯಾಪ್ಟನ್ ಅಭಿಮನ್ಯು ಹೊತ್ತಿರುವ 750 ಕೆಜಿ ತೂಕದ ಅಂಬಾರಿಯಲ್ಲಿ ವಿರಾಜಮಾನರಾದ ತಾಯಿ ಚಾಮುಂಡೇಶ್ವರಿಗೆ ಶುಭಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಮೂಲಕ 8ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಿ ಅತಿಹೆಚ್ಚು ಬಾರಿ ಚಾಲನೆ ನೀಡಿದ ಖ್ಯಾತಿಗೆ ಪಾತ್ರರಾಗಿದ್ದಾರೆ.

ಇನ್ನು ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಚಿವ ಶಿವರಾಜ್ ತಂಗಡಗಿ, ಡಿಸಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್ ಪುಷ್ಪಾರ್ಚನೆ ಮಾಡಿದರು.

ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಬನ್ನಿಮಂಟಪದವರೆಗೆ ಸುಮಾರು 5.3 ಕಿ. ಮೀ ಹೆಜ್ಜೆ ಹಾಕುತ್ತಿದ್ದಾನೆ. ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪಾ ಸಾಥ್ ನೀಡಿವೆ. ಜಂಬೂ ಸವಾರಿ ವೀಕ್ಷಣೆಗಾಗಿ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸುಮಾರು 45 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಪಂಜಿನ ಕವಾಯತಿನ ಮೂಲಕ ಮೈಸೂರು ದಸರಾದ ಆಕರ್ಷಣೆ ಜಂಬೂ ಸವಾರಿಗೆ ಅಧಿಕೃತ ತೆರೆ ಬೀಳಲಿದೆ.

ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುತ್ತಿರುವುದು ನನ್ನ ಸೌಭಾಗ್ಯ

ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಸ್ವಾಗತಿಸುವುದಾಗಿ ತಿಳಿಸಿದರು. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ , ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ” ಎಂದರು.

ದಸರಾ ಯಶಸ್ವಿ ಆಯೋಜನೆ

“ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ” ಎಂದರು.

ಜಂಟಿ ಸಮೀಕ್ಷೆ ನಂತರ ಬೆಳೆಪರಿಹಾರ

“ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರಕರ್ನಾಟಕದ ಕೆಲವು ಜಿ್ಲ್ಲೆಗಳಲ್ಲಿ ಅತಿವೃಷ್ಠಿಯಿಂದ ರಾಜ್ಯದಲ್ಲಿ ಸುಮಾರು 10ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲ್ಬುರ್ಗಿಯ ಭೇಟಿ ಸಂದರ್ಭದಲ್ಲಿ ತಿಳಿಸಲಾಗಿದ್ದು, ಸರ್ಕಾರ ಮತ್ತು ಎನ್ ಡಿಆರ್ ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17000 ರೂ ನೀರಾವರಿ ಜಮೀನಿಗೆ 17,500 ರೂ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31ಸಾವಿರ ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ ಹೆಚ್ಚಿನಮಳೆಯಿರುವುದರಿಂದ ಬೆಳೆಹಾನಿಯ ಜಂಟಿಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ ನೀಡಲಾಗುವುದು” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments