Homeಕರ್ನಾಟಕಮಹಿಳೆ ವಿವಸ್ತ್ರ ಪ್ರಕರಣ ಸಹಿಸಲಾಗದ ದುಷ್ಕೃತ್ಯ: ಡಿ ವಿ ಸದಾನಂದಗೌಡ

ಮಹಿಳೆ ವಿವಸ್ತ್ರ ಪ್ರಕರಣ ಸಹಿಸಲಾಗದ ದುಷ್ಕೃತ್ಯ: ಡಿ ವಿ ಸದಾನಂದಗೌಡ

ಬೆಂಗಳೂರು: ಬೆಳಗಾವಿಯಲ್ಲಿ ಎಸ್ಟಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ ವಿ ಸದಾನಂದಗೌಡ ಆಕ್ಷೇಪ ವ್ಯಕ್ತಪಡಿಸಿದರು.

ಬೆಂಗಳೂರಿನ ಮೇಖ್ರಿ ವೃತ್ತದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದನ್ನು ಖಂಡಿಸಿ ನಾವು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ” ಎಂದರು.

“ಪೊಲೀಸರು ಇಲ್ಲಿ ಪ್ರತಿಭಟನೆ ಮಾಡಬಾರದು ಎಂದು ಹೇಳಿದ್ದಾರೆ. ಇಷ್ಟು ಕೆಟ್ಟ ಆಡಳಿತವನ್ನು ನನ್ನ ಜೀವನದಲ್ಲೇ ನೋಡಿಲ್ಲ. ಆಡಳಿತ ವ್ಯವಸ್ಥೆ ಪೂರ್ತಿ ಹದಗೆಟ್ಟಿದೆ. ಮಹಿಳೆಯರ ಮೇಲೆ ಅತ್ಯಾಚಾರ ಹೆಚ್ಚಾಗಿದೆ” ಎಂದು ಆರೋಪಿಸಿದರು.

“‌ಡಿ ಕೆ ಶಿವಕುಮಾರ್‌ಗೆ ರಾಜ್ಯದ ಆಡಳಿತವೇ ಬೇಡ ಎಂಬಂತಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯ ಇಳಿಸಿ ಹೊಸ ಸಿಎಂ ಮಾಡಲು ಪ್ರಯತ್ನದಲ್ಲಿದ್ದಾರೆ. ಪೊಲೀಸ್ ಅಧಿಕಾರಿಗಳನ್ನು ವಿಶ್ವಾಸಕ್ಕೆ ತಗೊಂಡು ಸರ್ಕಾರ ಕೆಲಸ ಮಾಡ್ತಿಲ್ಲ. ಪರಮೇಶ್ವರ್, ಯಾವಾಗ ಎಚ್ಚೆತ್ತುಕೊಳ್ತಾರೋ ಅಲ್ಲಿವರೆಗೂ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ: ಬಿಜೆಪಿ ಸ್ವಭಾವತಃ ಮಹಿಳಾ ವಿರೋಧಿ, ಬೆಳಗಾವಿ ಭೇಟಿ ಕೇವಲ ರಾಜಕೀಯ: ಸಿದ್ದರಾಮಯ್ಯ ವಾಗ್ದಾಳಿ

“ಇಂದು ಬೆಳಗಾವಿಗೆ ಮಹಿಳಾ ಸಂಸದರ ನಿಯೋಗ ಕೂಡ ಭೇಟಿ ಕೊಟ್ಟಿದೆ. ನಾವು ಈಗಾಗಲೇ ಇದನ್ನು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡಿದ್ದೇವೆ. ಸೋಮವಾರ ನಡೆಯಲಿರುವ ಸಂಸತ್ ಅಧಿವೇಶನದಲ್ಲೂ ಇದನ್ನು ಪ್ರಸ್ತಾಪಿಸುತ್ತೇವೆ” ಎಂದು ತಿಳಿಸಿದರು.

“ಭ್ರೂಣ ಹತ್ಯೆ ಪ್ರಕರಣಗಳನ್ನು ತಡೆಯುವಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಲಾಯಿತು. ಇದೇವೇಳೆ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದರು. ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ ಹಿರೇಮನಿ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ಬಿಜೆಪಿ ಮಹಿಳಾ ಮೋರ್ಚಾ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀಮತಿ ಆಶಾ ರಾವ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಖಾ ಗೋವಿಂದ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮೀ ಆನಂದ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments