HomeUncategorizedಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ, ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ, ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಬರೆದುಕೊಂಡಿರುವ ಅವರು, “ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವಿಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣ ಏನೇ ಇರಲಿ, ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು” ಎಂದಿದ್ದಾರೆ.

“ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ. ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments