ನಾಯಕಿ ಸ್ಮೃತಿ ಮಂಧಾನ ಹಾಗೂ ಆಸೀಸ್ ಯಂಗ್‌ಸ್ಟರ್ ಜಾರ್ಜಿಯಾ ವೋಲ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 2ನೇ ಟ್ರೋಫಿ ತಂದುಕೊಟ್ಟಿದ್ದಾರೆ.
ವಡೋದರಾದಲ್ಲಿ ನಡೆದ ಡಬ್ಲ್ಯುಪಿಎಲ್ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ತಂಡದ ವಿರುದ್ಧ 6 ವಿಕೆಟ್ ಗಳಿಂದ ಗೆದ್ದು ಸತತ 2 ನೇ ಬಾರಿಗೆ ಡಬ್ಲ್ಯುಪಿಎಲ್ ಕಪ್ ನ್ನು ತನ್ನ ಮುಡಿಗೇರಿಸಿಕೊಂಡಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ ತಂಡ ಡೆಲ್ಲಿ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 203 ರನ್ ಗಳಿಗೆ ಕಟ್ಟಿ ಹಾಕಿತು.
ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 204 ರನ್‌ಗಳ ಗುರಿಯನ್ನ ಬೆನ್ನಟ್ಟಿದ ಆರ್ಸಿಬಿ 19.4 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ನಾಯಕಿ ಮಂಧಾನ 41 ಎಸೆತಗಳಲ್ಲಿ 12 ಬೌಂಡರಿ, 3 ಸಿಕ್ಸರ್‌ಗಳ ಸಹಿತ 87 ರನ್‌ಗಳಿಸಿದರೆ, ಜಾರ್ಜಿಯಾ ವೋಲ್ 54 ಎಸೆತಗಳಲ್ಲಿ 14 ಬೌಂಡರಿಗಳ ಸಹಿತ 79 ರನ್‌ಗಳಿಸಿ ಆರ್ಸಿಬಿಗೆ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಗೆಲುವಿನೊಂದಿಗೆ ಆರ್ಸಿಬಿ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 2ನೇ ಪ್ರಶಸ್ತಿ ತಂದುಕೊಟ್ಟರು.
ಕ್ರೀಸ್ ನಲ್ಲಿದ್ದ ನಡಿನ್ ಡಿ ಕ್ಲರ್ಕ್, ರಾಧಾ ಯಾದವ್ ತಂಡವನ್ನು ಗೆಲುವಿನ ದಡ ಸೇರಿಸಿದರು. ರನ್ ಚೇಸಿಂಗ್ ನಲ್ಲಿ ಆರ್ ಸಿಬಿ ಇತಿಹಾಸ ನಿರ್ಮಾಣ ಮಾಡಿದ್ದು, 19.4 ಓವರ್ ಗಳಲ್ಲಿ 204 ರನ್ ಗಳಿಸಿದ್ದು, ಇತಿಹಾಸದಲ್ಲೇ ಅತಿ ದೊಡ್ಡ ರನ್ ಚೇಸಿಂಗ್ ದಾಖಲೆ ನಿರ್ಮಿಸಿದೆ.
ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಆರ್ ಸಿಬಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಮೊದಲು ಫೈನಲ್ಸ್ ಪ್ರವೇಶಿಸಿ ಟ್ರೋಫಿಯನ್ನೂ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.



