Homeಕರ್ನಾಟಕಶಿಗ್ಗಾಂವಿಯಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಕಣಕ್ಕೆ: ಸಿದ್ದರಾಮಯ್ಯ

ಶಿಗ್ಗಾಂವಿಯಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಕಣಕ್ಕೆ: ಸಿದ್ದರಾಮಯ್ಯ

ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಅಥವಾ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುತ್ತಾರೆಂಬುದು ನಮಗೆ ಮುಖ್ಯವಲ್ಲ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರು ಚನಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ” ಎಂದರು.

ಬಿಜೆಪಿಯಿಂದ ಭರತ್‌ ಬೊಮ್ಮಾಯಿ ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರ ಮಗ ಭರತ್‌ ಬೊಮ್ಮಾಯಿ ಅವರು ಸಿಗ್ಗಾಂವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಗುರುವಾರ ನಾಮ ಪತ್ರ ಸಲ್ಲಿಸಿದ್ದು, ಶುಕ್ರವಾರ ಬೃಹತ್‌ ಮೆರವಣಿಗೆ ಮೂಲಕ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments