Homeಕರ್ನಾಟಕಅಲ್ಪಸಂಖ್ಯಾತರ ವಿರುದ್ಧ ಯತ್ನಾಳ ದ್ವೇಷದ ರಾಜಕಾರಣ: ಸಿಎಂ ಸಿದ್ದರಾಮಯ್ಯ‌ ಕಿಡಿ

ಅಲ್ಪಸಂಖ್ಯಾತರ ವಿರುದ್ಧ ಯತ್ನಾಳ ದ್ವೇಷದ ರಾಜಕಾರಣ: ಸಿಎಂ ಸಿದ್ದರಾಮಯ್ಯ‌ ಕಿಡಿ

ಬೆಳಗಾವಿ: ಯತ್ನಾಳ್ ಅವರು ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಅವರು ಇಂದು ತೆಲಂಗಾಣ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತೆರಳುವ ಮುನ್ನ . ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಹಾಶಿಮ್ ಪೀರಾ ದರ್ಗಾದ ಧರ್ಮಾಧಿಕಾರಿ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮೀ ಮೌಲ್ವಿ ಜೊತೆಗೆ ವೇದಿಕೆ ಹಂಚಿಕೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಹಾಶ್ಮೀ ಅವರೊಂದಿಗೆ ಬಹಳ ವರ್ಷಗಳಿಂದ ಸಂಬಂಧ ಇದೆ. ಅವರು ಚುನಾವಣೆ ಗೆಲ್ಲಲು ಈ ರೀತಿ ಮಾಡಬಾರದು. ಯತ್ನಾಳ್ ಮಹಾ ಸುಳ್ಳುಗಾರ. ಹಾಶ್ಮೀ ಅವರ ಮೇಲಿನ ಆರೋಪ ಸಾಬೀತು ಮಾಡಲಿ. ಅವರದ್ದೇ ಸರ್ಕಾರ 10 ವರ್ಷಗಳಿಂದ ಇದೆ. ಇಷ್ಟು ವರ್ಷ ಏನು ಮಾಡುತ್ತಿದ್ದರು. ಬರೀ ಆರೋಪ ಮಾಡುವುದಲ್ಲ ಅದನ್ನು ಸಾಬೀತು ಮಾಡಲಿ” ಎಂದು ಆಗ್ರಹಿಸಿದರು.

“ವಿರೋಧ ಪಕ್ಷದ ನಾಯಕನ ಸ್ಥಾನ ಹಾಗೂ ಪಕ್ಷದ ಅಧ್ಯಕ್ಷರ ಸ್ಥಾನ ಕ್ಕೆ ಪ್ರಯತ್ನಿಸಿದ್ದರು. ಎರಡೂ ಸಿಕ್ಕದ ಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದರು.

ದಕ್ಷಿಣ ಭಾರತದಲ್ಲಿ ಬಿಜೆಪಿ ಇಲ್ಲ ದಕ್ಷಿಣ ಭಾರತದಲ್ಲಿ ಬಿಜೆಪಿ ವಿಸ್ತರಣೆಯಾಗುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, “ದಕ್ಷಿಣ ಭಾರತದಲ್ಲಿ ಬಿಜೆಪಿ ವಿಸ್ತರಣೆ ಇರಲಿ, ಅದು ಇಲ್ಲವೇ ಇಲ್ಲ” ಎಂದರು.

ಗೋವಿಂದ ಕಾರಜೋಳ ಅವರು ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಹಣ ಬೇರೆಡೆಗೆ ಉಪಯೋಗವಾಗುತ್ತಿರುವ ಆರೋಪಕ್ಕೆ ಉತ್ತರಿಸಿ, ಅವರು ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಅನುದಾನ ಅವರ ಕಾಲದಲ್ಲಿ ಯಾಕೆ ಕಡಿಮೆಯಾಯಿತು ಎಂದು ಉತ್ತರ ಕೊಡಲಿ? ನಾನು ಕಡೆ ಬಜೆಟ್ ಮಂಡಿಸಿದಾಗ 30 ಸಾವಿರ ಕೋಟಿ ರೂ.ಗಳ ಅನುದಾನವಿತ್ತು. ಇವರ ಕಾಲಕ್ಕೆ 25 ಸಾವಿರ ಕೋಟಿಯಾಗಿದೆ. ಯಾಕೆ ಆಯ್ತು ಎಂದು ಉತ್ತರ ಕೊಡಬೇಕು” ಎಂದು ಒತ್ತಾಯಿಸಿದರು.

ಕಲಂ ‘ಡಿ’ ರದ್ದು ಶೀಘ್ರ ಆದೇಶ

“ಕಲಂ 7 ಡಿ ರದ್ದು ಮಾಡಿಲ್ಲವೆಂಬ ಆರೋಪಕ್ಕೆ ಉತ್ತರಿಸಿ ಬಜೆಟ್ ನಲ್ಲಿ ಘೋಷಣೆಯಾಗಿದೆ, ಇದನ್ನು ಮಾಡುತ್ತಿದ್ದೇವೆ. ಆದೇಶವನ್ನು ತಕ್ಷಣ ಹೊರಡಿಸಲಾಗುವುದು” ಎಂದರು.

ಯತ್ನಾಳ್ ಅವರನ್ನು ಒಳ್ಳೆಯ ಆಸ್ಪತ್ರೆಗೆ ಸೇರಿಸೋಣ: ಡಿ ಕೆ ಶಿವಕುಮಾರ್

ಸಿಎಂ ಭಯೋತ್ಪಾದಕರ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ಬಿಜೆಪಿ ಶಾಸಕ ಯತ್ನಾಳ್ ಅವರ ಆರೋಪದ ಬಗ್ಗೆ ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿ, “ಯತ್ನಾಳ್ ಅವರನ್ನು ನಿಮ್ಹಾನ್ಸ್ ಅಥವಾ ಬೇರೆ ಒಳ್ಳೆಯ ಆಸ್ಪತ್ರೆಗೆ ಸೇರಿಸೋಣ” ಎಂದು ತಿರುಗೇಟು ನೀಡಿದರು.

ಪಂಚರಾಜ್ಯ ಚುನಾವಣೆಯಲ್ಲಿ ನಿರೀಕ್ಷೆಗೆ ತಕ್ಕ ಫಲಿತಾಂಶ ಬಂದಿಲ್ಲ ಎಂದು ಕೇಳಿದಾಗ, “ಜನರ ತೀರ್ಪಿಗೆ ನಾವು ಗೌರವ ನೀಡುತ್ತೇವೆ” ಎಂದು ತಿಳಿಸಿದರು.

ನೀವು ಸದನದಲ್ಲಿ ಹಾಜರಾಗಿಲ್ಲ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಅವರು ಹುಡುಕಾಡಲಿ. ಕಾಳು, ಬಲೆ ಹಾಕಿಕೊಂಡು ಹುಡುಕಾಡಲಿ” ಎಂದರು.

ತೆಲಂಗಾಣ ಜನತೆಗೆ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ

“ನಮ್ಮ ಪಕ್ಷಕ್ಕೆ ಬೆಂಬಲ ನೀಡಿರುವ ತೆಲಂಗಾಣ ಜನರಿಗೆ ಧನ್ಯವಾದಗಳು. ಅವರಿಗೆ ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.

ತೆಲಂಗಾಣ ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ತೆರಳಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಹೈದರಾಬಾದ್ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯಿಸಿದರು.

“ತೆಲಂಗಾಣ ರಾಜ್ಯದ ಜನರು ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಗೌರವ ನೀಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ನಾವು ಅವರಿಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments