Homeಕರ್ನಾಟಕಯಡಿಯೂರಪ್ಪ ಪೋಕ್ಸೋ ಪ್ರಕರಣ: ಜ.10ಕ್ಕೆ ವಿಚಾರಣೆ ಮುಂದೂಡಿಕೆ

ಯಡಿಯೂರಪ್ಪ ಪೋಕ್ಸೋ ಪ್ರಕರಣ: ಜ.10ಕ್ಕೆ ವಿಚಾರಣೆ ಮುಂದೂಡಿಕೆ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ.10ಕ್ಕೆ ಮುಂದೂಡಿದೆ.

ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗಳವಾರತ ಪ್ರಕರಣದ ವಿಚಾರಣೆ ನಡೆಸಿತು. ಹಿರಿಯ ವಕೀಲ ಸಿ.ವಿ.ನಾಗೇಶ ಅವರು ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ವಾದ ಮಂಡಿಸಿದರು. ಆದರೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನಲ್ಲಿಯೇ ನಡೆಸುವಂತೆ ಸೂಚಿಸಿದ ನ್ಯಾಯಮೂರ್ತಿಗಳು ಮುಂದಿನ ವಿಚಾರಣೆ ಜ.10ಕ್ಕೂ ಮುಂದೂಡಿದರು.

ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಈ ಪ್ರಕರಣದಲ್ಲಿ ಬಿ.ಎಸ್.ವೈ ಭಾಗಿಯಾಗಿರುವ ಆರೋಪವನ್ನು ಎದುರಿಸುತ್ತಿದ್ದು, ಈ ಪೋಕ್ಸೋ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿ.ಎಸ್.ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈವರೆಗೂ ಬೆಂಗಳೂರಿನಲ್ಲಿಯೇ ನಡೆದಿದ್ದ ಈ ಪ್ರಕರಣ ವಿಚಾರಣೆ ಮಂಗಳವಾರ ಮಾತ್ರ ಧಾರವಾಡ ಹೈಕೋರ್ಟ್‌ನಲ್ಲಿ ನಡೆಯಿತು.

ಸಂತ್ರಸ್ತೆಯ ಸಹೋದರನಿಂದ ವಿಡಿಯೋ ಮಾತು

ಸಂತ್ರಸ್ತೆಯ ಸಹೋದರ ವಿಡಿಯೋ ಮಾಡಿ ಬಿಎಸ್‌ವೈ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಅಪ್ರಾಪ್ತ ಹೆಣ್ಣಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಕರಣದ ತನಿಖೆ ನ್ಯಾಯಾಲಯದಲ್ಲಿರುವಂತೆಯೇ ಇತ್ತ ಸಂತ್ರಸ್ಥೆಯ ಸಹೋದರ ಎಂದು ಹೇಳಿಕೊಂಡ ವ್ಯಕ್ತಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

“ತನ್ನ ಸಹೋದರಿ ತನಗಾದ ಚಿತ್ರಹಿಂಸೆಯಿಂದಾಗಿ ನಿತ್ಯ ನರಕ ನೋಡುತ್ತಿದ್ದಾಳೆ. ಅತೀವ ದುಃಖದಿಂದ ನಾನು ಇಂದು ಈ ವಿಡಿಯೋ ಮಾಡುತ್ತಿದ್ದೇನೆ. ನನ್ನ ಪುಟ್ಟ ತಂಗಿ ಮೇಲಾದ ದೌರ್ಜನ್ಯದಿಂದಾಗಿ ನನ್ನ ಕುಟುಂಬ ಚೇತರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲಾ ಕಾರಣ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ನಿಜಕ್ಕೂ ಯಡಿಯೂರಪ್ಪ ರಂತಹವರು ಇಂತಹ ಕೃತ್ಯವೆಸಗುತ್ತಾರೆಂದು ಊಹಿಸಲೂ ಅಸಾಧ್ಯ. ಅದೂ ಕೂಡ ಅವರ ಮೊಮ್ಮಕ್ಕಳಿಗಿಂತಲೂ ಚಿಕ್ಕವಳಾದ ನನ್ನ ಪುಟ್ಟ ತಂಗಿ ಮೇಲೆ ಇಂತಹ ಕೃತ್ಯ ನಡೆಸಿದ್ಜಾರೆ. ನನಗೆ ಮತ್ತು ನನ್ನ ಪುಟ್ಟ ತಂಗಿಗೆ ಇದು ನಿಜಕ್ಕೂ ಆಘಾತವಾಗಿದೆ” ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments