Homeಕರ್ನಾಟಕನಮ್ಮ ಶಾಸಕರಿಗೆ ಅನುದಾನ ಕೊಡದಿದ್ದರೆ ವಿಧಾನಸೌಧ ಮುಂದೆ ಉಪವಾಸ ಕೂರುವೆ: ಯಡಿಯೂರಪ್ಪ

ನಮ್ಮ ಶಾಸಕರಿಗೆ ಅನುದಾನ ಕೊಡದಿದ್ದರೆ ವಿಧಾನಸೌಧ ಮುಂದೆ ಉಪವಾಸ ಕೂರುವೆ: ಯಡಿಯೂರಪ್ಪ

ಬಿಜೆಪಿ ಶಾಸಕರ ವಿಧಾನಸಭಾ ಕ್ಷೇತ್ರಗಳಲ್ಲಿನ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡದೆ ಸೇಡಿನ ರಾಜಕಾರಣ ಮಾಡುತ್ತಿದೆ. ಕೂಡಲೇ ಸರ್ಕಾರ ತನ್ನ ನಿಲುವು ಬದಲಿಸಿಕೊಳ್ಳದಿದ್ದರೆ ವಿಧಾನಸೌಧದ ಮುಂದೆ ಉಪವಾಸ ಸತ್ಯಾಗ್ರಹ ಕೂರುವೆ ಎಂದು ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ಎಚ್ಚರಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ಬಿಜೆಪಿ ಶಾಸಕರನ್ನು ಗುರಿಯಾಗಿಸಿಕೊಂಡು ಅನುದಾನ ಕೊಡುತ್ತಿಲ್ಲ. ಇದೊಂದು ಸೇಡಿನ ರಾಜಕಾರಣ” ಎಂದು ಆರೋಪಿಸಿದರು.

“ಈ ತಿಂಗಳಿನಲ್ಲಿಯೇ ವಿಧಾನಸೌಧ ಮುಂಭಾಗ ಅಥವಾ ಫ್ರೀಡಂ ಪಾರ್ಕಿನಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಸರ್ಕಾರದಲ್ಲಿ ಯಾವುದೇ ನಿಯಂತ್ರಣವಿಲ್ಲ. ಜನ ಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದನೆ‌ ಇಲ್ಲ. ಹೀಗಾಗಿ ಈ ಸರ್ಕಾರದ ಆಡಳಿತ ವಿರೋಧಿ ನೀತಿಗಳನ್ನು ಜನರ ಮುಂದೆ ತೆಗೆದುಕೊಂಡು ಹೋಗುತ್ತೇವೆ” ಎಂದು ತಿಳಿಸಿದರು.

“ರಾಜಧಾನಿಯ ಕೆಲವು ರಸ್ತೆಗಳನ್ನು ನೋಡಿದರೆ ಇದು ಬೆಂಗಳೂರು ನಗರವೋ ಅಥವಾ ಹಳ್ಳಿಯೋ ಎಂಬ ಅನುಮಾನ ಕಾಡುತ್ತದೆ. ಕೆಲ ಕಡೆಗಳಲ್ಲಿ ಅನುದಾನ ನೀಡಿದ್ದರೂ, ಕೆಲಸ ಮಾಡಲು ಬಿಡುತ್ತಿಲ್ಲ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ವ್ಯಯುಕ್ತಿಕ ದ್ವೇಷ ಬಿಡಬೇಕು” ಎಂದರು.

“ರಾಜ್ಯದೆಲ್ಲೆಡೆ ಎಲ್ಲ ಮಾದರಿಯ ಕಾಮಗಾರಿಗಳ ಮಂಜೂರು ಹಾಗೂ ಹಣ ಪಾವತಿಗೆ ಶೇ. 7ರಿಂದ 7.5 ರಷ್ಟು ಕಮಿಷನ್ ಪಡೆಯಲಾಗುತ್ತಿದೆ. ಇದು ಈಗಿನ ಸರ್ಕಾರದ ಮಹಾನ್ ಸಾಧನೆಯಾಗಿದೆ. ಇದರ ವಿರುದ್ಧ ಹೋರಾಟ ಅಗತ್ಯವಾಗಿದ್ದು, ರಾಜ್ಯದ ಎಲ್ಲ ಭಾಗಗಳಿಂದ ಸಾವಿರಾರರು ಕಾರ್ಯಕರ್ತರು ಹೋರಾಟದಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದಾರೆ” ಎಂದು ತಿಳಿಸಿದರು.

“ಹಿಂದಿನ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ‌ನಡೆದ ಕಾಮಗಾರಿಗಳ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಅಕ್ರಮ ಕಾಮಗಾರಿಗಳು ನಡೆದಿದ್ದರೆ. ಈ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ. ಆದರೆ, ಉದ್ದೇಶ ಪೂರಕವಾಗಿ ಅನುದಾನ ನಿಲ್ಲಿಸಿ, ಕಾಮಗಾರಿ ನಡೆಯದಂತೆ ನೋಡಿಕೊಳ್ಳುವುದು ಸೇಡಿನ ರಾಜಕಾರಣವಾಗಿದೆ” ಎಂದು ಆರೋಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments