Homeಕರ್ನಾಟಕದಕ್ಷಿಣ ಕೊರಿಯಾದ ವೈಜಿ-1 ಕಂಪನಿಯಿಂದ ರಾಜ್ಯದಲ್ಲಿ ₹1,245 ಕೋಟಿ ಬಂಡವಾಳ ಹೂಡಿಕೆ

ದಕ್ಷಿಣ ಕೊರಿಯಾದ ವೈಜಿ-1 ಕಂಪನಿಯಿಂದ ರಾಜ್ಯದಲ್ಲಿ ₹1,245 ಕೋಟಿ ಬಂಡವಾಳ ಹೂಡಿಕೆ

ಅತ್ಯಾಧುನಿಕ ಕಟಿಂಗ್‌ ಟೂಲ್ಸ್‌ ತಯಾರಿಸುವ ದಕ್ಷಿಣ ಕೊರಿಯಾದ ಜಾಗತಿಕ ಕಂಪನಿಯಾಗಿರುವ ವೈಜಿ-1, ಕರ್ನಾಟಕದಲ್ಲಿ ₹1,245 ಕೋಟಿ ಬಂಡವಾಳ ಹೂಡಿಕೆ ಮಾಡುವುದಾಗಿ ಪ್ರಕಟಿಸಿದೆ.

ಬಂಡವಾಳ ಹೂಡಿಕೆ ಆಕರ್ಷಿಸಲು ದಕ್ಷಿಣ ಕೊರಿಯಾಕ್ಕೆ 5 ದಿನಗಳ ಭೇಟಿ ನೀಡಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗದ ಜೊತೆಗೆ ಬುಧವಾರ ನಡೆದ ಸಮಾಲೋಚನೆ ಸಂದರ್ಭದಲ್ಲಿ ಕಂಪನಿಯು ಈ ಘೋಷಣೆ ಮಾಡಿದೆ.

“ಕರ್ನಾಟಕದಲ್ಲಿ ಕೊರಿಯಾ ಭಾಷೆ ಕಲಿಸುವ ಮತ್ತು ತರಬೇತಿ ನೀಡುವ ಕೇಂದ್ರ, ಇಂಧನ ಆವಿಷ್ಕಾರ ಮತ್ತು ತಂತ್ರಜ್ಞಾನ ಪ್ರಗತಿ ಕ್ಷೇತ್ರಗಳಲ್ಲಿ ಅತ್ಯಾಧುನಿಕ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ (ಆರ್‌ಆ್ಯಂಡ್‌ಡಿ) ಸ್ಥಾಪಿಸಲಾಗುವುದು” ಎಂದು ಕಂಪನಿಯ ಚೇರ್ಮನ್‌ ಹೊ ಕ್ಯೂನ್‌ ಸಾಂಗ್‌ ತಿಳಿಸಿದ್ದಾರೆ.

“ಐಟಿ, ಎಲೆಕ್ಟ್ರಾನಿಕ್‌ ಸಿಸ್ಟಮ್ಸ್‌, ವೈಮಾಂತರಿಕ್ಷ ಹಾಗೂ ರಕ್ಷಣೆಗೆ ಸಂಬಂಧಿಸಿದ ಉದ್ದಿಮೆಗಳಲ್ಲಿ ಕರ್ನಾಟಕವು ಭಾರತದಲ್ಲಿ ಮೊದಲ ಸ್ಥಾನದಲ್ಲಿ ಇರುವುದನ್ನು ಸಚಿವ ಪಾಟೀಲ ಅವರು ಕೊರಿಯಾದ ಕಂಪನಿಗಳಿಗೆ ಮನವರಿಕೆ ಮಾಡಿಕೊಟ್ಟರು. ಸೌರಶಕ್ತಿಯೂ ಸೇರಿದಂತೆ ರಾಜ್ಯವು ವಿಪುಲ ಪ್ರಮಾಣದಲ್ಲಿ ನೈಸರ್ಗಿಕ ಸಂಪನ್ಮೂಲ ಹೊಂದಿದೆ. ವಿದ್ಯುತ್‌ ಚಾಲಿತ ವಾಹನ, ಎಲೆಕ್ಟ್ರಾನಿಕ್ಸ್‌ ಮತ್ತು ಸ್ಮಾರ್ಟ್‌ಫೋನ್‌ ತಯಾರಿಕೆಗೆ ರಾಜ್ಯ ಸರ್ಕಾರವು ಗರಿಷ್ಠ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದೆ” ಎಂದು ಹೇಳಿದರು.

ರಾಜ್ಯದಲ್ಲಿ ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನಗಳ ಮಾರುಕಟ್ಟೆಯು ಗಮನಾರ್ಹವಾಗಿ ವಿಸ್ತರಣೆಗೊಳ್ಳುತ್ತಿರುವುದನ್ನು ಕೊರಿಯಾದ ಕಂಪನಿಗಳ ಗಮನಕ್ಕೆ ತರಲಾಯಿತು. ಈಗಾಗಲೇ ಭಾರತದ ವಿವಿಧ ನವೋದ್ಯಮಗಳಲ್ಲಿ ₹1,162 ಕೋಟಿ ಹೂಡಿಕೆ ಮಾಡಿರುವ ಜಾಗತಿಕ ಗೇಮಿಂಗ್‌ ಕಂಪನಿ ಕ್ರಾಫ್ಟನ್‌ ಇಂಕ್‌, ಮುಂದಿನ 2 ರಿಂದ 3 ವರ್ಷಗಳಲ್ಲಿ ಗೇಮಿಂಗ್‌ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ₹1,245 ಕೋಟಿ ಹೂಡಿಕೆ ಮಾಡುವುದಾಗಿ ನಿಯೋಗದ ಜೊತೆಗಿನ ಸಭೆಯಲ್ಲಿ ಬದ್ಧತೆ ತೋರಿದೆ. ಭಾರತದಲ್ಲಿನ ಗೇಮಿಂಗ್‌ ಎಂಜಿನಿಯರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳುವ ಬಗ್ಗೆ ಕ್ರಾಫ್ಟನ್‌ ಕಂಪನಿಯು ಇಂಗಿತ ವ್ಯಕ್ತಪಡಿಸಿದೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments